ಬೆಂಗಳೂರು || Airport Roadನಲಿ ಯುವಕನ ಮೃತದೇಹ ಪತ್ತೆ

ಬೆಂಗಳೂರು || Airport Roadನಲಿ ಯುವಕನ ಮೃತದೇಹ ಪತ್ತೆ

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮುನಿರಾಜು (22) ಎಂಬ ಯುವಕನ ಮೃತದೇಹ ಏರ್ಪೋರ್ಟ್ ರಸ್ತೆಯ ಮಾಲ್ ಆಫ್ ಏಷ್ಯಾ ಮುಂಭಾಗದ ರಸ್ತೆಯಲ್ಲಿ ರಾತ್ರಿ 12:30ರ ಸುಮಾರಿಗೆ ಕಂಡುಬಂದಿದೆ. ಮೃತದೇಹ ಗಮನಿಸಿರುವ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿರುವುದು ಕಂಡು ಬಂದಿದ್ದು, ಮೇಲಿನಿಂದ ಬಿದ್ದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಕೊಡಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೃತ ಮುನಿರಾಜು ಹೆಬ್ಬಾಳದ ಶಿವಶಂಕರ ಲೇಔಟ್ ನಿವಾಸಿಯಾಗಿದ್ದು, ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಭಾನುವಾರ ಸಂಜೆ ಸ್ನೇಹಿತರನ್ನು ಭೇಟಿಯಾಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೊರಟಿದ್ದ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಕೊಡಿಗೆಹಳ್ಳಿ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೇಲ್ಸೇತುವೆಯಿಂದ ಬಿದ್ದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಹೆದ್ದಾರಿಯಲ್ಲಿನ ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *