ಬೆಂಗಳೂರು || ಸರಳವಾಗಿ, ಅಭಿಮಾನದಿಂದ ಯಡಿಯೂರಪ್ಪನವರ ಜನ್ಮ ದಿನಾಚರಣೆ- ವಿಜಯೇಂದ್ರ

ಬೆಂಗಳೂರು || ಸರಳವಾಗಿ, ಅಭಿಮಾನದಿಂದ ಯಡಿಯೂರಪ್ಪನವರ ಜನ್ಮ ದಿನಾಚರಣೆ- ವಿಜಯೇಂದ್ರ

ಬೆಂಗಳೂರು: ಯಡಿಯೂರಪ್ಪ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬಹಳ ಸಂಭ್ರಮದಿಂದ ಅವರ ಜನ್ಮದಿನವನ್ನು ರಾಜ್ಯದೆಲ್ಲೆಡೆ ಆಚರಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ಅಪ್ರತಿಮ ಹೋರಾಟಗಾರ, ಧೀಮಂತ ನಾಯಕ, ನಾಡಿನ ಮಾಜಿ ಮುಖ್ಯಮಂತ್ರಿಗಳು, ನನ್ನ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ. ತಾಲ್ಲೂಕು ಕೇಂದ್ರಗಳು, ಜಿಲ್ಲಾ ಕೇಂದ್ರಗಳಲ್ಲಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟು ಅಲ್ಲಿ ಹಣ್ಣು ಹಂಚುವ ಕಾರ್ಯ ನೆರವೇರಿಸುತ್ತಿದ್ದಾರೆ. ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸುತ್ತಿದ್ದಾರೆ ಎಂದು ವಿವರಿಸಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆ, ಬೈಸಿಕಲ್ ಯೋಜನೆಗಳನ್ನು ಜಾರಿಗೊಳಿಸಿದ್ದರು. ಆ ಫಲಾನುಭವಿಗಳನ್ನು ನಮ್ಮ ಕಾರ್ಯಕರ್ತರು ಭೇಟಿ ಮಾಡುತ್ತಿ…

ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ  ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಜರಿದ್ದರು.

Leave a Reply

Your email address will not be published. Required fields are marked *