ಬೆಂಗಳೂರು : ಮನನೊಂದು ಮಡಿಕೇರಿ ಬಿಜೆಪಿ ಕರ‍್ಯರ‍್ತರೊಬ್ಬರು ಕಚೇರಿಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಊಃಖ ಲೇಔಟ್ನಲ್ಲಿ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕರ‍್ಯರ‍್ತ.

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿರುವ ವಿನಯ್ ಸೋಮಯ್ಯ ಅವರು, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಜೈಲಿಂದ ಹೊರಬಂದ ಮೇಲೆ ವಿನಯ್ಗೆ ಕೈ ಶಾಸಕರು ನಿತ್ಯ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಬಹಳ ಮನನೊಂದಿದ್ದ ವಿನಯ್ ಇಂದು ಮುಂಜಾನೆ ೪:೩೦ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮ್ಯಾನ್ ಪವರ್ ಸಪ್ಲೈ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿದ್ದ ವಿನಯ್ ಅವರಿಗೆ ಮದುವೆಯಾಗಿ ಮಗು ಇದ್ದು, ಕುಟುಂಬ ಸಮೇತ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿತ್ತು. ಇದೀಗ ಇಬ್ಬರು ಕಾಂಗ್ರೆಸ್ ಶಾಸಕರ ಕಿರುಕುಳದಿಂದ ಬೇಸತ್ತು ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಕುರಿತು ಹೆಣ್ಣೂರು ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸದ್ದು, ತನಿಖೆ ಚುರುಕುಗೊಳಿಸಿದ್ದಾರೆ.