ಬೆಂಗಳೂರು || ಬಿಬಿಎಂಪಿ, ಬೆಸ್ಕಾಂ ಸಿಬ್ಬಂದಿಗೆ ಹೊಸ ವರ್ಷದ ಶಾಕ್ ಕೊಟ್ಟ ಡಿಸಿಎಂ, ಏನದು?

ಬೆಂಗಳೂರು || ಬಿಬಿಎಂಪಿ, ಬೆಸ್ಕಾಂ ಸಿಬ್ಬಂದಿಗೆ ಹೊಸ ವರ್ಷದ ಶಾಕ್ ಕೊಟ್ಟ ಡಿಸಿಎಂ, ಏನದು?

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೊಸ ವರ್ಷದ ಆಚರಣೆ ಹಿನ್ನೆಲೆ ಬಿಬಿಎಂಪಿ, ಬೆಸ್ಕಾಂ ಹಾಗೂ ಜಲಮಂಡಳಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಈ ಇಲಾಖೆಗಳ ಸಿಬ್ಬಂದಿಗೆ ಹೊಸ ವರ್ಷದ ಆಚರಣೆ ಬದಲಿಗೆ ಡ್ಯೂಟಿ ಮಾಡುವಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ ಹಾಗೂ ಜಲಮಂಡಳಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಅಲ್ಲದೆ ಬೆಂಗಳೂರಿನಲ್ಲಿ ಜನವರಿ 3ರವರೆಗೆ ಜನರು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರುತ್ತಾರೆ. ಹಾಗಾಗಿ ಸಾರ್ವಜನಿಕರಿಗೆ ಸೇವೆ ನೀಡಬೇಕು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲ ವಲಯದ ಅಧಿಕಾರಿಗಳು ಕರ್ತವ್ಯದಲ್ಲಿ ಹಾಜರಿರಬೇಕು ಎಂದು ಖಡಕ್ ಆಗಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯುಎಸ್ಎಸ್ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಡಿ.ಕೆ.ಶಿವಕುಮಾರ್ ಅವರು ಮೊನ್ನೆಯೇ ಸೂಚನೆ ನೀಡಿದ್ದರು. ಹಾಗಾಗಿ ಹೊಸ ವರ್ಷಾಚರಣೆಯ ಪ್ಲ್ಯಾನ್ನಲ್ಲಿದ್ದ ಸಿಬ್ಬಂದಿಗೆ ಶಾಕ್ ನೀಡಿದ್ದರು. ಎಲ್ಲರೂ ಬೆಂಗಳೂರಿನಲ್ಲೇ ಇರಬೇಕು, ಹೊಸ ವರ್ಷದ ನೆಪದಲ್ಲಿ ಕರ್ತವ್ಯದಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದಿದ್ದರು.

ಇನ್ನು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಸುಮಾರು 10 ಲಕ್ಷ ಜನ ನಿರೀಕ್ಷೆ ಇದ್ದಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಭದ್ರತೆಗೆ ಸುಮಾರು 11 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಪಾರ್ಟಿ ಮಾಡುವುದಕ್ಕೆ ಮಧ್ಯರಾತ್ರಿ 1ಗಂಟೆವರೆಗೂ ಅವಕಾಶ ನೀಡಲಾಗಿತ್ತು.

ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ನಲ್ಲಿ ಯುವಜನರು ಸೇರಿದಂತೆ ಅಪಾರ ಜನಸಮೂಹ ನೆರೆದಿತ್ತು. ಕೇಕ್ ಕತ್ತರಿಸಿ, ಪಟಾಕಿ ಸಿಡಿಸುವುದರ ಮೂಲಕ ಹೊಸ ವರ್ಷಕ್ಕೆ ವೆಲ್ಕಮ್ ಮಾಡಿ ಸಂಭ್ರಮಿಸಿದ್ದಾರೆ. ಹೊಸ ವರ್ಷದ ಸಂಭ್ರಮದಲ್ಲಿ ಕೆಲವರು ಹುಚ್ಚಾಟ ಮೆರೆಯುವ ಹಿನ್ನೆಲೆ ನಗರದ ಎಲ್ಲ ಫ್ಲೈಓವರ್ಗಳನ್ನ ನಿನ್ನೆ ರಾತ್ರಿಯಿಂದ ಇಂದು ಮುಂಜಾನೆವರೆಗೆ ಬಂದ್ ಮಾಡಲಾಗಿತ್ತು. ಕೆಲವರು ಹೊಸ ವರ್ಷದ ಸಮಯದಲ್ಲಿ ಓವರ್ಗಳ ಮೇಲೆ ವೀಲಿಂಗ್, ಅತಿ ವೇಗದ ಚಾಲನೆ ಜೊತೆಗೆ ಅಪಘಾತಗಳನ್ನೂ ಮಾಡುತ್ತಿದ್ದರು.

Leave a Reply

Your email address will not be published. Required fields are marked *