ಬೆಂಗಳೂರು || ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ: KSRTC ಸೂಚನೆ

ಬೆಂಗಳೂರು || ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ: KSRTC ಸೂಚನೆ

ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್ಆರ್ಟಿಸಿ ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್ಆರ್ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.

ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗುತ್ತಿದೆ. ಮೈಸೂರು ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ.

ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *