ಬೆಂಗಳೂರು: ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ. ಅತ್ಯಾಚಾ*ರ ಪ್ರಕರಣದಿಂದ ಕೈ ಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.
ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೇ ಪ್ರಜ್ವಲ್ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿತ್ತು.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬAಧಿಸಿದAತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 4 ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು 4 ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು.
ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ನಲ್ಲಿ ಕಸರತ್ತು ನಡೆಸಿದ್ದರು. ಇನ್ನು ಈ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಜಾಮೀನು ರದ್ದಾಗಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.