ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ರಾಜ್ಯ ಹೈಕೋರ್ಟ್ ಎಲ್ಲ ಆರೋಪಿಗಳಿಗೂ ಜಾಮೀನು ನೀಡಿದೆ ಇದೀಗ ರಾಜ್ಯ ಪೊಲೀಸ್ ಇಲಾಖೆಯು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಏಪ್ರಿಲ್ 22ಕ್ಕೆ ಮುಂದೂಡದೆ.

ನಟ ದರ್ಶನ್ ಸೇರಿದಂತೆ 7ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಿತು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬOಧಿಸಿದOತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್ ಅವರ ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಹೈಕೋರ್ಟ್, ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡಿದ ಬಳಿಕ ರಾಜ್ಯ ಪೊಲೀಸ್ ಇಲಾಖೆ ಗೃಹ ಇಲಾಖೆಯ ಅನುಮತಿ ಪಡೆದುಕೊಂಡು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಜಾಮೀನು ರದ್ದು ಮಾಡುವಂತೆ ಕೋರಿದೆ.