ಬೆಂಗಳೂರು || ಅಮಾನತು ವಿರುದ್ಧ ಪಿಡಿಒ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು || ಅಮಾನತು ವಿರುದ್ಧ ಪಿಡಿಒ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತಮ್ಮ ಅಮಾನತನ್ನು ಪ್ರಶ್ನಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಇತ್ಯರ್ಥವಾಗಬೇಕಿದ್ದು, ಅಲ್ಲಿಯವರೆಗೂ ಅಮಾನತುಗೊಳಿಸದಿದ್ದಲ್ಲಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಪಿಡಿಒ ಡಿ ಎಂ ಪದ್ಮನಾಭ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿ ಎಂ ಜೋಶಿ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.

ಅಮಾನತು ವಿರುದ್ಧ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧೀಕರಣ ನವೆಂಬರ್ ೨೫, ೨೦೨೪ ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಪಿಡಿಒ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ ೭(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಸೆಪ್ಟೆಂಬರ್ ೬, ೨೦೨೪ ರಂದು ಪಿಡಿಒ ಅವರನ್ನು ಅಮಾನತುಗೊಳಿಸಲಾಗಿತ್ತು. ಆದರೆ ಅಮಾನತಿಗೆ ಯಾವುದೇ ಕಾರಣಗಳನ್ನು ನೀಡದಿರುವುದನ್ನು ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಕರ್ನಾಟಕ ಸಾಮಾನ್ಯ ಸೇವೆಗಳ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) ಕೇಡರ್ ಮತ್ತು ನೇಮಕಾತಿ (ತಿದ್ದುಪಡಿ) ನಿಯಮಗಳು ೨೦೨೪ ನೇಮಕಾತಿಯ ಅಧಿಕಾರವನ್ನು ಆಯುಕ್ತರು – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ಗೆ ವಹಿಸಲಾಗಿದ್ದು, ಈ ರೀತಿಯಲ್ಲಿ ಸಿಬ್ಬಂದಿಯನ್ನು ಅಮಾನತುಗೊಳಿಸುವ ಅಧಿಕಾರವನ್ನು ಸಿಇಒಗೆ ನೀಡಿಲ್ಲ ಎಂಬುದ

Leave a Reply

Your email address will not be published. Required fields are marked *