ಬೆಂಗಳೂರು & ಹೊಸೂರು ವಿಮಾನ ನಿಲ್ದಾಣ: ಇನ್ನೊಂದೇ ಹೆಜ್ಜೆ ಬಾಕಿ!

ಲಂಡನ್ನ || Southend plane ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನ..!

ಬೆಂಗಳೂರು:  ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪೈಪೋಟಿ ನೀಡುವುದಕ್ಕೆ ಮುಂದಾಗಿರುವ ತಮಿಳುನಾಡು ಸರ್ಕಾರವು ಇದೀಗ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಿದೆ. ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ಅಂತಿಮ ಕಾರ್ಯಸಾಧ್ಯತಾ ವರದಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)ವು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಿದೆ. ಇದು ಹೊಸೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಎಂದು ಹೇಳಲಾಗಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇನ್ನೂ ಜಾಗಗಳನ್ನು ಕರ್ನಾಟಕ ಸರ್ಕಾರವು ಶಾರ್ಟ್ ಲಿಸ್ಟ್ ಮಾಡುತ್ತಿದೆ. ಈ ರೀತಿ ಇರುವಾಗಲೇ ತಮಿಳುನಾಡು ಸರ್ಕಾರವು ಈ ಯೋಜನೆಗೆ ಭೂಸ್ವಾಧೀನ ಹಂತಕ್ಕೆ ತಲುಪಿದೆ.

ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಎಎಐ ತಂಡವು ತಮಿಳುನಾಡಿಗೆ ವರದಿ ನೀಡಿರುವುದರಿಂದ ತಮಿಳುನಾಡಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಪ್ರಕ್ರಿಯೆಗಳು ಸುಲಭವಾಗಿವೆ. ಇದರ ಮುಂದುವರಿದ ಭಾಗವಾಗಿ ತಮಿಳುನಾಡು ಸರ್ಕಾರವು ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಪತ್ರ ಬರೆದು ಈ ಸಂಬಂಧ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಲಾಗಿದೆ.

ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ಬೇಗ ಪ್ರಾರಂಭವಾದಷ್ಟೂ ಅದರ ಪರಿಣಾಮ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಆಗಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಬೀಳಲಿದ್ದು, ಇದರ ಮೇಲೆ ಒತ್ತಡ ಕಡಿಮೆ ಮಾಡುವುದಕ್ಕೆ ಹಾಗೂ ಬೇಡಿಕೆಗೆ ಅನುಗುಣವಾಗಿ ಮತ್ತೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಹೇಳಲಾಗಿದೆ. ಅಂದಿನಿಂದಲೂ ತಮಿಳುನಾಡು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಅಲರ್ಟ್ ಆಗಿದೆ. ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಕಳೆದ ವರ್ಷ ಹೊಸ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ವಿಷಯ ಪ್ರಸ್ತಾಪಿಸಿತ್ತು. ಈ ಭಾಗದಲ್ಲಿ ಆಟೋಮೊಬೈಲ್ ಹಾಗೂ ಕೈಗಾರಿಕೆಗಳು ಸಾಕಷ್ಟು ಅಭಿವೃದ್ಧಿಯಾಗಿದೆ. ಅಲ್ಲದೇ ಈ ಬಾರಿ ಬಜೆಟ್ನಲ್ಲಿ ತಮಿಳುನಾಡು ಸರ್ಕಾರವು ಈ ಭಾಗದಲ್ಲಿ “ಜ್ಞಾನ ಕಾರಿಡಾರ್” ಸಹ ಅಭಿವೃದ್ಧಿ ಮಾಡುವುದಾಗಿ ಘೋಷಿಸಿದೆ. ಈ ಪ್ರದೇಶವನ್ನು ಮಾಹಿತಿ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸಲು ಅಲ್ಲಿನ ಸರ್ಕಾರ ಮುಂದಾಗಿದೆ.

5 ಸ್ಥಳಗಳಲ್ಲಿ ಪರಿಶೀಲನೆ: ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡವು ಈ ಭಾಗದಲ್ಲಿ 5 ಜಾಗಗಳನ್ನು ಪರಿಶೀಲನೆ ನಡೆಸಿತ್ತು. ಇದಾದ ನಂತರ ಅಂತಿಮವಾಗಿ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ತನೇಜಾ ಏರೋಸ್ಪೇಸ್ ಹಾಗೂ ಏವಿಯೇಷನ್ ಲಿ ಸೇರಿದಂತೆ ವಿವಿಧ ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ.

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಇನ್ನು ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆಯೂ ಕೆಲವೊಂದು ಪ್ರಮುಖ ಬದಲಾವಣೆಗಳು ಆಗಿವೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದೀಗ ಮಾಗಡಿ ರಸ್ತೆಯಲ್ಲಿ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿ ಪರಿಶೀಲನೆ ಮಾಡಲಾಗಿದೆ.

Leave a Reply

Your email address will not be published. Required fields are marked *