ಬೆಂಗಳೂರು : ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆ(ಡಿ.29ಕ್ಕೆ ನಡೆದ)ಯಲ್ಲಿಯೂ ಅನೇಕ ಲೋಪಗಳು ಆಗಿವೆ. ಆದ್ದರಿಂದ ಆ ಪರೀಕ್ಷೆಯ ಫಲಿತಾಂಶವನ್ನು ತಡೆಹಿಡಿದು, ಮರು ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.
ರವಿವಾರ ನಗರದ ಖಾಸಗಿ ಹೊಟೇಲ್ನಲ್ಲಿ ಆಯೋಜಿಸಿದ್ದ ದುಂದು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ಕೆಪಿಎಸ್ಸಿ ಪರೀಕ್ಷಾ ಲೋಪಗಳಿಗೆ ಕಾರಣರಾದ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಕೂಡಲೇ ಸರಕಾರ ವಜಾಗೊಳಿಸಬೇಕು. ಕೆಪಿಎಸ್ಸಿ ಪರೀಕ್ಷಾ ಅಭ್ಯರ್ಥಿಗಳ ಪರವಾಗಿ ಸರಕಾರ ಏನನ್ನು ಮಾತಾಡುತ್ತಿಲ್ಲ. ಅದಕ್ಕಾಗಿ ಫೆ.18ರಂದು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯ ದಿನಾಂಕ ಘೋಷಣೆ ಆದ ತಕ್ಷಣ ಕೆಪಿಎಸ್ಸಿ ಯವರು ಫಲಿತಾಂಶ ಪ್ರಕಟ ಮಾಡಿದ್ದಾರೆ. ಯಾಕೆ ಇಷ್ಟೊಂದು ಆತುರ, ಜತೆಗೆ ಕೆಪಿಎಸ್ಸಿಯಿಂದ ಯಾವುದೇ ಅನ್ಯಾಯವಾಗಿಲ್ಲ ಎನ್ನುವ ಪ್ರಕಟನೆಪ್ರಕಟನೆ ಕೂಡ ನೀಡಿದೆ. ಕೆಪಿಎಸ್ಸಿನಲ್ಲಿ ಏನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಕೆಪಿಎಸ್ಸಿಯಲ್ಲಿರುವ ಎಲ್ಲ ಅಧಿಕಾರಿಗಳು ಆದಷ್ಟು ಬೇಗ ಜೈಲಿಗೆ ಹೋಗುತ್ತಾರೆ ಎಂದು ತಿಳಿಸಿದರು