ಬೆಂಗಳೂರು || ತುಮಕೂರಿಗೆ ಹರಿದು ಬಂದ ಉದ್ಯೋಗಗಳು : ಕೈಗಾರಿಕಾ ಅಭಿವೃದ್ಧಿಗೆ 285 ಕೋಟಿ ವೆಚ್ಚ ಹೂಡಿಕೆಗೆ ಅನುಮೋದನೆ

ಬೆಂಗಳೂರು || ತುಮಕೂರಿಗೆ ಹರಿದು ಬಂದ ಉದ್ಯೋಗಗಳು || ಕೈಗಾರಿಕಾ ಅಭಿವೃದ್ಧಿಗೆ 285 ಕೋಟಿ ವೆಚ್ಚ ಹೂಡಿಕೆಗೆ ಅನುಮೋದನೆ

ಬೆಂಗಳೂರು : ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ 69 ಯೋಜನೆಗಳ ಒಟ್ಟು ₹3,500.86 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ 24,954 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಈ ಎಲ್ಲ ಜಿಲ್ಲೆಗಳಲ್ಲಿ ಕೈಗಾರಿಕೆ: ಈ ಬಗ್ಗೆ ಸಚಿವ ಎಂ. ಬಿ ಪಾಟೀಲ್ ಅವರು ಮಾತನಾಡಿ, ತುಮಕೂರು, ವಿಜಯಪುರ, ರಾಮನಗರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಹೊಸ ಕೈಗಾರಿಕೆಗಳು ಅಸ್ತಿತ್ವಕ್ಕೆ ಬರಲಿವೆ. ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕೈಗಾರಿಕೆಗಳಲ್ಲಿ ಮಷಿನ್‌ಟೂಲ್, ತಂಪು ಪಾನೀಯ, ಕಾರ್ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್, ಕಬ್ಬಿಣ ಮತ್ತು ಉಕ್ಕು, ಪರಿಶುದ್ಧ ಜಲಜನಕ ಅನಿಲ, ಹಾಲಿನ ಪುಡಿ ತಯಾರಿಕೆ ಘಟಕಗಳು ಇವೆ ಎಂದು ತಿಳಿಸಿದ್ದಾರೆ.

₹50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ 12 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ₹2311.88 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 18,972 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ₹15 ಕೋಟಿಯಿಂದ ₹ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 55 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹ 1148.98 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 5,832 ಜನರಿಗೆ ಉದ್ಯೋಗ ಅವಕಾಶಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗೆ ನೀಡಿರುವ ಅನುಮೋದನೆಯಿಂದ ₹ 40 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 150 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿವೆ ಎಂದು ವಿವರಿಸಿದ್ದಾರೆ.

Leave a Reply

Your email address will not be published. Required fields are marked *