ಬೆಂಗಳೂರು : ಕೋರ್ಟ್ ಆವರಣದಲ್ಲೇ ವಕೀಲೆಗೆ ಚಾಕು

ಇಂದು ಬೆಳಿಗ್ಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಆರೋಪಿಯೊಬ್ಬ ವಕೀಲೆಗೆ ಚಾಕು ಇರಿದು ಭೀಕರವಾಗಿ ಕೊಲೆಗೆ ಯತ್ನಿಸಿದ್ದಾನೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಎಂಬ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಜಯರಾಮ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು.

ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ವಿಚಾರಣೆಗೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ ಸ್ನೇಹಿತೆ, ವಕೀಲೆ ವಿಮಲಾಗೆ ಕೋರ್ಟ್ ಹಾಲ್​ 1ರಲ್ಲಿ ಚಾಕು ಇರಿದಿದ್ದಾನೆ. ಘಟನೆ ಕುರಿತಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *