ಬೆಂಗಳೂರು: ಬಿಸಿಲ ಬೇಗೆಗೆ ಕಾದು ಹೋಗಿರುವ ಸಿಲಿಕಾನ್ ಸಿಟಿಗೆ ಮಳೆರಾಯ ಬೆಳಗ್ಗೆಯೇ ತಂಪೆರೆದಿದ್ದಾನೆ. ಬೆಂಗಳೂರಿನ ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಭರ್ಜರಿ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದು, ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇನ್ನೂ ದಾಸರಹಳ್ಳಿ, ಪೀಣ್ಯ, ಎಂಟನೇ ಮೈಲಿ ಸುತ್ತಮುತ್ತ ತುಂತುರು ಮಳೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ ತಂಪೆರೆದಿದ್ದಾನೆ. ಪೀಣ್ಯಾ, ದಾಸರಹಳ್ಳಿ, ನಾಗಸಂದ್ರ ಭಾಗಗಳಲ್ಲಿ ತುಂತುರು ಮೆಳೆಯಾಗ್ತಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದೆ. ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೇಸಿಗೆಯ ಬಿಸಿಲ ಬೇಗೆಗೆ ಜನ ಬಸವಳಿದು ಹೋಗಿದ್ದಾರೆ. ಇದೀಗ ಮುಂಗಾರು ಮಳೆಗೂ ಮೊದಲು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲ ದಿನಗಳಿಂದ ಹಲವು ಜಿಲ್ಲೆಗಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆ ಸಾಧ್ಯತೆ ಇದೆ. ಇನ್ನೂ ಇಂದಿನಿಂದ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಅಲ್ಲದೇ ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯದಾದ್ಯಂತ ಇಂದಿನಿಂದ ಏಪ್ರಿಲ್ 6 ರವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.