ಜಕ್ಕೂರು ಮೇಲುಸೇತುವೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಆದೇಶ: ಅಧಿಕಾರಿಗಳೊಂದಿಗೆ ಸಮಗ್ರ ಸಭೆ ನಡೆಸಿದ ಆಯುಕ್ತರು.!
ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ನಗರ ಪಾಲಿಕೆಯ ಆಯುಕ್ತರ ಕಚೇರಿ ಸಭಾಂಗಣದಲ್ಲಿ ವಿವಿಧ ವಿಭಾಗಗಳ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಕಾಮಗಾರಿಗಳ ಸ್ಥಿತಿ, ಹೊಸ ಟೆಂಡರ್ ಪ್ರಕ್ರಿಯೆಗಳು, ನಿರ್ವಹಣಾ ಟೆಂಡರ್ಗಳ ಪ್ರಗತಿ, ಮಳೆನೀರು ಚರಂಡಿಗಳ ಸ್ವಚ್ಛತೆ, ಮೇಲ್ಮೈ ಚರಂಡಿಗಳ ಡಿಸಿಲ್ಟಿಂಗ್, ಮರಗಳ ನಿರ್ವಹಣೆ, ಮಳೆಗಾಲ ಪೂರ್ವ ಸಿದ್ಧತೆ ಹಾಗೂ ಅಪಾಯದ ಸ್ಥಳಗಳ ಕುರಿತು ವಿವರವಾದ ಚರ್ಚೆ ನಡೆಸಲಾಯಿತು.ಶಿಕ್ಷಣ ವಿಭಾಗಕ್ಕೆ ಸಂಬಂಧಿಸಿದಂತೆ ಅವಶ್ಯವಿರುವ ಕಾಮಗಾರಿಗಳ / ನಿರ್ವಹಣೆ ಸಂಬಂಧ ತ್ವರಿತವಾಗಿ ಟೆಂಡರ್ ಕರೆದು ಕ್ರಮ ವಹಿಸಲು ಸೂಚನೆ ನೀಡಿದರು.

*ಮಳೆನೀರು ಚರಂಡಿಗಳು ಮತ್ತು ಕಾಲುವೆಗಳ ಡಿಸಿಲ್ಟಿಂಗ್ ಕಾರ್ಯ ಪೂರ್ಣಗೊಳಿಸಿ
ಮಳೆಗಾಲಕ್ಕೂ ಮುನ್ನ ಎಲ್ಲಾ ಮಳೆನೀರು ಚರಂಡಿಗಳು ಮತ್ತು ಕಾಲುವೆಗಳ ಡಿಸಿಲ್ಟಿಂಗ್ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಚರಂಡಿಗಳಲ್ಲಿ ಕಸ ಹಾಗೂ ಹೂಳು ತುಂಬಿರುವುದರಿಂದ ಮಳೆನೀರು ಸರಾಗವಾಗಿ ಹರಿಯಲು ತೊಂದರೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ತ್ವರಿತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳಲ್ಲಿ ಮಳೆನೀರು ನಿಲ್ಲದಂತೆ ನಿರ್ವಹಣಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಪಾಲಿಕೆ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ಸ್ವಚ್ಛ ಮತ್ತು ಸುಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಸೂಚಿಸಲಾಯಿತು.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




