ಬೆಂಗಳೂರು: ನಗರದ ಎಂಇಎಸ್ ರಸ್ತೆಯಲ್ಲಿರುವ ಮದರ್ ತೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಶ್ಚಿಮ ಬಂಗಾಳದ 21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಪೋಷಕರು ಪಶ್ಚಿಮ ಬಂಗಾಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ದ್ವಿತೀಯ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ ಮೊಂಡಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 7.30ರ ಸುಮಾರಿಗೆ ಹಾಸ್ಟೆಲ್ ರೂಮಿನಲ್ಲಿ ತನ್ನ ದುಪ್ಪಟ್ಟದೊಂದಿಗೆ ನೇಣು ಬಿಗಿದುಕೊಂಡಿದ್ದ ದಿಯಾಳನ್ನು ನೋಡಿದ ಆಕೆಯ ರೂಮ್ ಮೇಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಹಾಸ್ಟೆಲ್ ಸ್ನೇಹಿತೆಯರು ಹಾಗೂ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಕೌಟುಂಬಿಕ ಸಮಸ್ಯೆಗಳೇ ದಿಯಾ ಅವರ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಭಾನುವಾರ ಸಂಜೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಆಕೆಯ ಕುಟುಂಬದವರು ದೂರು ದಾಖಲಿಸಿಕೊಂಡು ಮೃತದೇಹವನ್ನು ಸಂಗ್ರಹಿಸಿದ್ದಾರೆ