ಬೆಂಗಳೂರು || 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕುರಿತು ಅಂತಿಮ ನಿರ್ಧಾರ ತಿಳಿಸಿದ ಪರಮೇಶ್ವರ್

ಬೆಂಗಳೂರು || ಸಚಿವ ಜಿ.ಪರಮೇಶ್ವರಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!

ಬೆಂಗಳೂರು: ಬೆಂಗಳೂರಿನಲ್ಲಿ ಈಗಾಗಲೇ ಒಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದ್ದರೂ ಭವಿಷ್ಯದ ದೃಷ್ಟಿಯಿಂದ ಇನ್ನೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಬೆಂಗಳೂರಿನ ಯಾವ ಭಾಗದಲ್ಲಿ ವಿಮಾನ ನಿಲ್ದಾಣ ರೂಪಿಸಿದರೆ ಅದು ಅಭಿವೃದ್ಧಿಗೆ ಪೂರಕವಾಗಬಹು

ಈ ಕುರಿತು ಮಾಧ್ಯಮಗಳ ಜೊತೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಜಿಲ್ಲೆಯಲ್ಲಿ ಆಗಲಿ ಎಂಬುವುದು ನಮ್ಮ ಬೇಡಿಕೆ. ಅಂತಿಮವಾಗಿ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಎರಡನೇ ಏರ್ಪೋರ್ಟ್ ತುಮಕೂರಿನಲ್ಲೇ ಆಗಬೇಕೆಂಬುವುದು ನಮ್ಮ ಬೇಡಿಕೆಯಾಗಿದೆ ಎಂದು ಪರಮೇಶ್ವರ್ ಅವರು ಹೇಳಿದ್ದು, ಬೇರೆಯವರು ತಮ್ಮದೇ ಆದ ಬೇಡಿಕೆಯನ್ನು ಇಡಬಹುದು. ತಮಿಳುನಾಡು ಸರ್ಕಾರದಿಂದ ಹೊಸೂರಿನಲ್ಲಿ ಏರ್ ಪೋರ್ಟ್ ಬೇಡಿಕೆ ಮೊದಲಿಂದಲೇ ಇದೆ. ಕೇಂದ್ರಕ್ಕೂ ಪ್ರಸ್ತಾವನೆ ಕಳಿಸಿದ್ದಾರೆ ಎಂದು ಹೇಳಿದರು.

ಬೆಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗ್ತಿದೆ. 35 ನಿಮಿಷದ ಪ್ರಯಾಣಕ್ಕೆ 2 ಗಂಟೆ ತೆಗೆದುಕೊಳ್ಳುತ್ತಿದೆ. ಅಂತರಾಷ್ಟ್ರೀಯ ವಿಮಾನಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ. ಈ ನಿಟ್ಟಿನಲ್ಲಿ ಎರಡನೇ ಏರ್ ಪೋರ್ಟ್ ಬೇಕು. ಈಗಾಗಲೇ ಮುಂಬೈ, ದೆಹಲಿಯಲ್ಲಿ ಎರಡೆರಡು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳು ಇವೆ. ಹೀಗಾಗಿ ಬೆಂಗಳೂರಿನಲ್ಲೂ ಆಗಬೇಕು ಎಂಬುವುದು ಬೇಡಿಕೆಯಾಗಿದೆ. ನಮ್ಮ ರಾಜ್ಯದ ಬೆಳವಣಿಗೆ ದೃಷ್ಟಿಯಿಂದ ಇದು ಅನುಕೂಲಕರವಾಗಿದೆ. ಆದ್ರೆ ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಅನುಮತಿ ಕೊಡುತ್ತೆ ನೋಡಬೇಕು ಎಂದು ಪರಮೇಶ್ವರ್ ಹೇಳಿದರು.

ತುಮಕೂರು ಭಾಗದಲ್ಲಿ ಆಗಲಿ ಎಂಬುವುದು ನಮ್ಮ ಬೇಡಿಕೆ, ಬೇರೆಯವರು ಅವರ ಬೇಡಿಕೆ ಇಟ್ಟಿದ್ದಾರೆ. ಈಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮನಾ ನಿಲ್ದಾಣವನ್ನು ಬಿಡದಿಯಲ್ಲಿ ಮಾಡಬೇಕು ಎಂಬ ಪ್ರಸ್ತಾವನೆ ಇತ್ತು. ಆದರೆ ತಾಂತ್ರಿಕ ಕಾರಣದಿಂದ ಆಗಿರಲಿಲ್ಲ. ಎಲ್ಲಿ ವಿಮಾನ ನಿಲ್ದಾಣ ಮಾಡಬೇಕು ಎಂಬ ಬಗ್ಗೆ ಸ್ಥಳ ಅಂತಿಮಗೊಂಡಿಲ್ಲ. ಇದೀಗ ಮತ್ತೊಂದು ಬಾರಿ ಬಿಡದಿಯನ್ನು ಪರಿಗಣಿಸಲಾಗುತ್ತದಾ ಎಂಬುವುದನ್ನು ನೋಡಬೇಕಾಗಿದೆ ಎಂದು ಹೇಳಿದರು. ಒಟ್ನಲಿ ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣವಾಗಲಿದೆ. ತುಮಕೂರಿಗೆ ಬೇಕು ಅಂತರಾಷ್ಟ್ರೀಯ ಏರ್ಪೋರ್ಟ್ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತೊಂದು ಬಾರಿ ಆಗ್ರಹಿಸಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಅಂತಿಮ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟದ್ದು, ಈ ಬಗ್ಗೆ ಸರ್ಕಾರ ಮನವಿಯನ್ನ ಮಾಡಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗ್ತಿದೆ. 35 ನಿಮಿಷದ ಪ್ರಯಾಣಕ್ಕೆ 2 ಗಂಟೆ ತೆಗೆದುಕೊಳ್ಳುತ್ತಿದೆ. ಅಂತರಾಷ್ಟ್ರೀಯ ವಿಮಾನಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ. ಈ ನಿಟ್ಟಿನಲ್ಲಿ ಎರಡನೇ ಏರ್ ಪೋರ್ಟ್ ಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *