ಬೆಂಗಳೂರು: ವಿದ್ಯುತ್ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಅಥವಾ ಅತೀ ಹೆಚ್ಚು ಮಳೆ ಬೀಳುವಂತಹ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗುತ್ತದೆ. ಹಾಗೆಯೇ ಇದೀಗ ಡಿಸೆಂಬರ್ 11ರಿಂದ 13ರ ವರೆಗೆ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಉಪಕೇಂದ್ರ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಡಿಸೆಂಬರ್ 11, 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಸಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಟ್?: ಬೆಳ್ಳಂದೂರು, ಆರ್ಎಂಜೆಡ್, ಎಕ್ಸೊಸ್ಪೇಸ್ ಎಕೋ ವರ್ಲ್ಡ್, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ ಇಂಡಸ್ಟ್ರಿಯಲ್ ಲೇಔಟ್, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ.
ಜೋಗಿ ಕಾಲೋನಿ, ಈಸ್ಟ್ ಲ್ಯಾಂಡ್ ಹೊಲ್ಡಿಂಗ್ ಬಿಲ್ಡಿಂಗ್, ಸೇಂಟ್ ಜಾನ್ ಸ್ಟಾಫ್ ಕ್ವಾಟ್ರಸ್, ಮಾರುತಿನಗರ, ಆಡುಗೋಡಿ 7ನೇ ಮತ್ತು 8ನೇ ಬ್ಲಾಕ್, ಸಿ.ಎ.ಆರ್. ಪೊಲೀಸ್ ಕ್ವಾಟ್ರಸ್, ಆಡುಗೊಡಿ ಮುಖ್ಯ ರಸ್ತೆ, ಸೇಂಟ್ ಜಾನ್ ಆಸ್ಪತ್ರೆ, ಮಡಿವಾಳ, ಮಾರುತಿ ನಗರ, ಡಾಲರ್ಸ್ ಕಾಲೋನಿ, 100 ಫೀಟ್ ರಿಂಗ್ ರಸ್ತೆ, ಆರ್ಯಾಕಲ್ ಕಂಪನಿ, ಬಿ.ಜಿ.ರಸ್ತೆ, ಕೆ.ಹೆಚ್.ಬಿ. ಕಾಲೋನಿ, 5ನೇ ಬ್ಲಾಕ್ ಇಂಡಸ್ಟ್ರಿಯಲ್ ಏರಿಯಾ ಕೋರಮಂಗಲ.
ಮೈಕೋ 3, 4, 5 ಮತ್ತು 6ನೇ ಬ್ಲಾಕ್ ಕೋರಮಂಗಲ, ಭುವನಪ್ಪ ಕಾವೇರಿ ಬಡಾವಣೆ, ಕೃಷ್ಣಾ ನಗರ ಇಂಡಸ್ಟ್ರಿಯಲ್ ಲೇಔಟ್, ಎಸ್.ಜಿ.ಪಾಳ್ಯ, 2ನೇ ಬ್ಲಾಕ್ ಧವನ್ ಜ್ಯೂಯಲರಿ, ಮಡಿವಾಳ ಸಂತೆ, ಸಿದ್ದಾರ್ಥ ಕಾಲೋನಿ, ಹ್ಯಾಪಿ ಮೈಂಡ್ ಕಂಪನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ. ಡಿಸೆಂಬರ 13ರಂದು ಎಲ್ಲೆಲ್ಲಿ ವಿದ್ಯುತ್ ಕಟ್?: ಬೆಂಗಳೂರು ಉತ್ತರ ವೃತ್ತ ಅಟ್ಟೂರು ಯಲಹಂಕ ಎಂಯುಎಸ್ ಎಸ್ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಶುಕ್ರವಾರ (ಡಿಸೆಂಬರ್ 13) ಬೆಳಗ್ಗೆ 11ರಿಂದ ಮಧ್ಯಾಹ್ನ 05 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕೋರಮಂಗಲ ವಿಭಾಗದಲ್ಲಿ ಮತ್ತು ಕೆ.ಎಂ.ಎಫ್, ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407 ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ ಪಟ್ಟಣ ಬಿಬಿಎಂಪಿ ರಸ್ತೆ, ಕರೆ, ಬಿಬಿಎಂಪಿ ರಸ್ತೆ ಕೋಡಿ ರೋಡ್, ಪುರವಂಕರ, ಅಪಾರ್ಟ್ಮೆಂಟ್ ಆರ್.ಎಂ.ಝೆಡ್ ಮಾಲ್, ಆರ್.ಎಂ.ಝಡ್ ರೆಸಿಡೆನ್ಸಿಯಲ್ ಅಟ್ಟೂರು ಯಲಹಂಕ ಎಂಯುಎಸ್ ಎಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.