ಬೆಂಗಳೂರು || ಓದಲು ರೂಮ್‍ಗೆ ತೆರಳಿದ್ದ SSLC ವಿದ್ಯಾರ್ಥಿನಿ ನೇಣಿಗೆ ಶರಣು

ಬೆಂಗಳೂರು || ಓದಲು ರೂಮ್ಗೆ ತೆರಳಿದ್ದ SSLC ವಿದ್ಯಾರ್ಥಿನಿ ನೇಣಿಗೆ ಶರಣು

ಬೆಂಗಳೂರು: ಎಸ್‍ಎಸ್‍ಎಲ್‍ಸಿ (SSLC) ವಿದ್ಯಾರ್ಥಿನಿಯೊಬ್ಬಳು (Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹನುಮಂತ ನಗರದ ಶ್ರೀ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಭೂಮಿಕಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಪ್ರಿಪರೇಟರಿ ಪರೀಕ್ಷೆಗೆ ಓದಲು ರೂಮ್‍ಗೆ ತೆರಳಿದ್ದಳು. ಈ ವೇಳೆ ನೇಣು ಹಾಕಿಕೊಂಡಿದ್ದಾಳೆ ಎಂದು ಪೋಷಕರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹನುಮಂತ ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *