“ಮದರ್ ಆಫ್ ಆಲ್ ಡೀಲ್ಸ್” ಭಾರತ-ಯೂರೋಪ್ ಫ್ರೀ ಟ್ರೇಡ್ ಡೀಲಿಗೆ ಸಹಿ.
ನವದೆಹಲಿ : ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದನ್ನು ಘೋಷಿಸಲಾಗಿದೆ. ಇದರೊಂದಿಗೆ, ಎರಡು ದಶಕಗಳಿಂದ ನಡೆಯುತ್ತಿದ್ದ ಅವಿರತ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ ಪ್ರವೇಶ ಒಂದೇ ಒಪ್ಪಂದದಲ್ಲಿ ಭಾರತಕ್ಕೆ ಸಿಗಲಿದೆ. ಯೂರೋಪಿಯನ್ ಕೌನ್ಸಿಲ್ ಮುಖ್ಯಸ್ಥ ಆಂಟೋನಿಯೋ ಕೋಸ್ಟಾ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಡೀಲ್ಗೆ ಸಹಿ ಹಾಕಿದ್ದಾರೆ.
ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವಿನ ವ್ಯಾಪಾರ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಅವರು ‘ಮದರ್ ಆಫ್ ಆಲ್ ಡೀಲ್ಸ್’ (ವಿಶ್ವದ ಅತಿದೊಡ್ಡ ಒಪ್ಪಂದ) ಎಂದು ಬಣ್ಣಿಸಿದ್ದಾರೆ. ಭಾರತದ ಜವಳಿ, ಹರಳು, ಆಭರಣ, ಲೆದರ್ ಇತ್ಯಾದಿ ಸೆಕ್ಟರ್ಗಳಿಗೆ ಪುಷ್ಟಿ ಸಿಗುವ ನಿರೀಕ್ಷೆ ಇದೆ.
ವರ್ಷಗಳಿಂದ ನಡೆದ ಪ್ರಯತ್ನಗಳಿಗೆ ಫಲ
ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವೆ ಫ್ರೀ ಟ್ರೇಡ್ ಡೀಲ್ಗಾಗಿ 2007ರಲ್ಲೇ ಮಾತುಕತೆ ಆರಂಭವಾಗಿತ್ತು. ಟ್ಯಾರಿಫ್, ಮಾರುಕಟ್ಟೆ ಪ್ರವೇಶ ಮತ್ತು ನಿಯಮಗಳ ಕಾರಣಗಳಿಂದ 2013ರಲ್ಲಿ ಮಾತುಕತೆಗಳು ಸ್ಥಗಿತಗೊಂಡಿದ್ದವು. 2022ರಲ್ಲಿ ಮತ್ತೆ ಚಾಲನೆಗೊಂಡಿತು. ಜಾಗತಿಕ ವ್ಯಾಪಾರ ಬಿಕ್ಕಟ್ಟು ಉದ್ಭವಗೊಂಡ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಒಪ್ಪಂದ ಸಂಬಂಧ ಮಾತುಕತೆಗೆ ವೇಗ ಸಿಕ್ಕಿತು.
ಮದರ್ ಆಫ್ ಆಲ್ ಡೀಲ್ಸ್ ಎನ್ನೋದು ಯಾಕೆ?
ಭಾರತ ವಿಶ್ವದಲ್ಲೇ ನಾಲ್ಕನೇ ಅಥವಾ ಐದನೇ ಅತಿದೊಡ್ಡ ಆರ್ಥಿಕತೆಯ ದೇಶ ಎನಿಸಿದೆ. ಐರೋಪ್ಯ ಒಕ್ಕೂಟದಲ್ಲಿ 27 ದೇಶಗಳಿವೆ. ಯೂರೋಪ್ ಖಂಡದ ಅರ್ಧಕ್ಕೂ ಹೆಚ್ಚು ದೇಶಗಳು ಈ ಯೂನಿಯನ್ನ ಭಾಗವಾಗಿವೆ. ಭಾರತ ಹಾಗೂ ಈ 27 ದೇಶಗಳ ಆರ್ಥಿಕತೆಯನ್ನು ಗಣನೆಗೆ ತೆಗೆದುಕೊಂಡರೆ, ಅದು ವಿಶ್ವದ ಶೇ. 25ರಷ್ಟು ಜಿಡಿಪಿಯಷ್ಟಾಗುತ್ತದೆ.
For More Updates Join our WhatsApp Group :




