ಬೆಂಗಳೂರು || ಬೆಂಗಳೂರು ಖಾಕಿಗೆ ಶಕ್ತಿ ತುಂಬಿದ ಸರ್ಕಾರ: ಮಹಿಳೆಯರ ರಕ್ಷಣೆಗೆ 650 ಕೋಟಿ ರೂ.ಖರ್ಚು..

ಬೆಂಗಳೂರು || ಬೆಂಗಳೂರು ಖಾಕಿಗೆ ಶಕ್ತಿ ತುಂಬಿದ ಸರ್ಕಾರ: ಮಹಿಳೆಯರ ರಕ್ಷಣೆಗೆ 650 ಕೋಟಿ ರೂ.ಖರ್ಚು..

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ, ಸಿಬ್ಬಂದಿಗೆ ಅಗತ್ಯ ಸಿಹಿ ಸುದ್ದಿ ನೀಡಿದೆ. ಹೊಸ ಕಚೇರಿ, ಹೊಸ ಪೊಲೀಸ್ ಠಾಣೆ ಜೊತೆಗೆ ಸೇರಿದಂತೆ ಪೊಲೀಸ್ ವಸತಿ ನಿಗಮದಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ 28 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿಗಳ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುತ್ತಿದೆ. ಈ ಕುರಿತು ಗೃಹ ಸಚಿವ ಜಿ.ಪಮರೇಶ್ವರ ಅವರು ತಿಳಿಸಿದ್ದಾರೆ.

ನಗರದ ಚಾಮರಾಜಪೇಟೆ ಪೊಲೀಸ್ ಠಾಣೆ, ಕಬ್ಬನ್ಪಾರ್ಕ್ ಪೊಲೀಸ್ ಠಾಣೆ, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರ ಕಚೇರಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆ ಹಾಗೂ ಪುಲಿಕೇಶಿನಗರದ ಲಾಜರ್ ರಸ್ತೆಯಲ್ಲಿ ನೂತನ ಪೊಲೀಸ್ ವಸತಿ ಗೃಹಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಇಡೀ ದೇಶದಲ್ಲಿ ಕರ್ನಾಟಕ ಪೊಲೀಸರು ಉತ್ತಮವಾದ ಪೊಲೀಸ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅನೇಕ ಸವಾಲುಗಳನ್ನು ಎದುರಿಸಿಕೊಂಡು ಬರುತ್ತಿದೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಇಲಾಖೆಗೆ ಅನೇಕ ಉತ್ತೇಜನ ಕೊಟ್ಟಿದ್ದಾರೆ. ಪೊಲೀಸರು ವಾಸಿಸುವ ಮನೆಗಳನ್ನು ನೋಡಿದಾಗ ಸುಸಜ್ಜಿತವಾಗಿ ಇರಲಿಲ್ಲ ಎಂದು ಹಳೆಯದನ್ನು ಸ್ಮರಿಸಿದರು.

ಶೇ. 46ರಷ್ಟು ಮನೆ ನಿರ್ಮಾಣ ಯೋಗ್ಯವಾದ ಮನೆಗಳನ್ನು ಕಲ್ಪಿಸಬೇಕು ಎಂಬ ಉದ್ದೇಶದಿಂದ ಪೊಲೀಸ್ ವಸತಿ ಗೃಹ ಯೋಜನೆ ಆರಂಭಿಸಲಾಯಿತು. ಈವರೆಗೆ ಶೇ. 46ರಷ್ಟು ಮನೆಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಪೊಲೀಸ್ ವಸತಿ ಗೃಹ ಯೋಜನೆಯನ್ನು ಮುಂದುವರಿಸಲಾಗುವುದು. ಪೊಲೀಸ್ ಸಿಬ್ಬಂದಿಗೆ ಯೋಜನೆಯಡಿ ಮತ್ತಷ್ಟು ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು. ಕೇಂದ್ರ ಅನುದಾನ ನೀಡಿದರೆ ಸವಲತ್ತು ಪೊಲೀಸ್ ವಸತಿ ನಿರ್ಮಿಸಲು ಹೆಚ್ಚಿನ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಅನುದಾನ ನೀಡಿದರೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಲು ಸಹಕಾರಿಯಾಗುತ್ತದೆ. ನಗರದಲ್ಲಿ ಅಪರಾಧಗಳು ಇಳಿಮುಖವಾಗಿವೆ. ಜನಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮತ್ತಷ್ಟು ಕಠಿಣವಾಗಿ ಕೆಲಸ ಮಾಡಬೇಕು ಎಂದು ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು.

ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ನಿಯಂತ್ರಣ ಮಾಡಿದ್ದೇವೆ. ದೇಶದಲ್ಲೇ ಮೊದಲ ಬಾರಿಗೆ ಸೈಬರ್ ವಿಭಾಗಕ್ಕೆ ಡಿಜಿಪಿ ಸ್ಥಾನಮಾನದ ಅಧಿಕಾರಿಯನ್ನು ನಿಯೋಜಿಸಲಾಗುತ್ತಿದೆ. ಡೇಟಾ ಕದಿಯುವ ಜಾಲವನ್ನು ತಡೆಗಟ್ಟಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು. ಮಹಿಳೆಯರ ರಕ್ಷಣೆಗಾಗಿ 650 ಕೋಟಿ ರೂ. ಖರ್ಚು.. ಬೆಂಗಳೂರಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸರ್ಕಾರ, ಗೃಹ ಇಲಾಖೆ ಹೆಚ್ಚು ಆದ್ಯತೆ ನೀಡುತ್ತದೆ. ಇದರ ಭಾಗವಾಗಿಯೇ ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 650 ಕೋಟಿ ರೂ. ಖರ್ಚು ಮಾಡಿ, ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಸಣ್ಣ ಘಟನೆಯು ಜರುಗದಂತೆ ಇಲಾಖೆಯ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ನೂರಾರು ಕೋಟಿ ರೂ.ಮೌಲ್ಯದ ಡ್ರಗ್ಸ್ ಪತ್ತೆ ಮಾಡಿ ನಾಶಪಡಿಸಲಾಗಿದೆ. ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಒಂದು ತಿಂಗಳ ಮುಂಚೆಯೇ ವಿಶೇಷ ಕಾರ್ಯಾಚರಣೆ ಕೈಗೊಂಡು ಮಾದಕ ದ್ರವ್ಯಗಳನ್ನು ಪತ್ತೆ ಹಚ್ಚಲಾಗಿದೆ. ಡ್ರಗ್ಸ್ ವಿರುದ್ಧ ನಮ್ಮ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ತಿಳಿಸಿದರು. ಪೊಲೀಸರಿಗೆ ಎಲ್ಲ ಸವಲತ್ತು ನೀಡಲು ಸರ್ಕಾರ ಬದ್ಧ; ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು. ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *