ಬೆಂಗಳೂರು: ಚಳಿಗಾಲದ ಹೊತ್ತಲ್ಲೇ ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ವಿಪರೀತ ಬಿಸಿಲ ಅನುಭವವಾಗುತ್ತಿದೆ.
ಸೋಮವಾರ ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 36.8 ಡಿಗ್ರಿ ಹಾಗೂ ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 31.9, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.5 ಡಿಗ್ರಿ ಹಾಗೂ ಹೆಚ್‍ಎಎಲ್‍ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಮುಂದಿನ ಒಂದು ವಾರವೂ ಇದೇ ಹವಮಾನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.