ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಹಲವು ಜಿಲ್ಲೆಗಳಲ್ಲಿ ಎಚ್ಚರಿಕೆ.!
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಯಾದಗಿರಿ ಮತ್ತು ರಾಯಚೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಜೋರಾದ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 7 ಮತ್ತು 8ರಂದು ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.ಮೈಸೂರು ಜಿಲ್ಲೆಯಲ್ಲಿ ಗಾಳಿಮಳೆಗೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
For More Updates Join our WhatsApp Group :




