ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಇವತ್ತು ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ 2024 ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅಂತೆಯೇ ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪರ್ದೀವಾಲ, ನ್ಯಾ.ಆರ್. ಮಹದೇವನ್ ಪೀಠ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ದರ್ಶನ್ ಜಾಮೀನು ರದ್ದು ಮಾಡಲು ಪೊಲೀಸರು ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್, ಎ7 ಅನುಕುಮಾರ್, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್ ಹಾಗೂ ಎ 14 ಪ್ರದೂಶ್ಗೆ ಮತ್ತೆ ಸಂಕಷ್ಟ ಎದುರಾಗಿದೆ.