ಬೆಂಗಳೂರಿನಲ್ಲಿ ಸಂಚಾರ ನಿಯಮಗಳ (ಟ್ರಾಫಿಕ್ ರೂಲ್ಸ್ ಬ್ರೇಕ್) ಉಲ್ಲಂಘನೆ ಕಡಿಮೆಯಾಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರು ಹಾಗೂ ಕುಡಿದು ವಾಹನ ಚಲಾಯಿಸುವವರಿಗೆ ಬುದ್ಧಿ ಕಲಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಜಾಮ್ ಸಹ ಹೆಚ್ಚಾಗುತ್ತಲ್ಲೇ ಇದೆ. ಟ್ರಾಫಿಕ್ ಜಾಮ್‌ಗೆ ಟ್ರಾಫಿಕ್ ನಿಯಮ ಉಲ್ಲಂಘನೆಯೂ ಪ್ರಮುಖ ಕಾರಣವಾಗಿದೆ. ಹೀಗಾಗಿ, ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಫೀಕ್ ಅವರ್‌ಗಳಲ್ಲಿ ಮಾತ್ರವಲ್ಲ ಮಧ್ಯಾಹ್ನದ ಸಮಯದಲ್ಲೂ ನಗರದ ಕೆಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಪೊಲೀಸರಿಗೆ ಇದನ್ನು ನಿಭಾಯಿಸುವುದು ಸವಾಲಾಗಿದೆ. ಹೀಗಾಗಿ, ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ ಹಾಗೂ ಡ್ರಿಂಕ್ & ಡ್ರೈವ್ ಮಾಡುವವರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಪ್ಲಾನ್ ಮಾಡಿಕೊಳ್ಳಲಾಗುತ್ತಿದೆ.
ನಿಯಮ ಉಲ್ಲಂಘಿಸಿದರೆ ಎಫ್‌ಐಆರ್: ಇನ್ನು ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಿಂಕ್ & ಡ್ರೈವ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದಕ್ಕೆ ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆ ಮಾಡಿ ವಾಹನ ಚಲಾಯಿಸುವವರಿಗೆ ಪಾಠ ಕಲಿಸಲು ನಿರ್ಧರಿಸಲಾಗಿದೆ. ಈ ರೀತಿ ನಿಯಮ ಉಲ್ಲಂಘನೆ ಮಾಡುವವರ ಲೈಸೆನ್ಸ್ ಇನ್ಮುಂದೆ ಕ್ಯಾನ್ಸಲ್ ಆಗಲಿದೆ!
ಇನ್ನು ಡಿಎಲ್ ಇಲ್ಲದೆ ಇರುವವರು (ಡ್ರೈವಿಂಗ್ ಲೈಸೆನ್ಸ್) ಡ್ರಿಂಕ್ & ಡ್ರೈವ್ ಮಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ಮುಂದೆ ಡ್ರಿಂಕ್ & ಡ್ರೈವ್ ಮಾಡುವ ವಾಹನ ಸವಾರರು ತಪಾಸಣೆ ಮಾಡುವಾಗ ಸಿಕ್ಕಿ ಬಿದ್ದರೆ ಅವರ ಮೇಲೆ ಎಫ್‌ಐಆರ್ ದಾಖಲಾಗಲಿದೆ. ಹೌದು ನಗರದಲ್ಲಿ ಡ್ರಿಂಕ್ & ಡ್ರೈವ್ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯ ಸಂಚಾರ ಪೊಲೀಸರು ಮುಂದಾಗಿದ್ದಾರೆ.
ಡ್ರಿಂಕ್ & ಡ್ರೈವ್‌ಗೆ ಮಾತ್ರ ದಂಡವಲ್ಲ: ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಇಲ್ಲಿಯವರೆಗೆ ಡ್ರಿಂಕ್ & ಡ್ರೈವ್ ಪರೀಕ್ಷೆ ಮಾಡುತ್ತಿದ್ದರು. ಅಲ್ಲದೇ ಈ ರೀತಿ ನಿಯಮ ಉಲ್ಲಂಘಿಸುವವರಿಗೆ ಕೇವಲ ದಂಡವನ್ನು ಮಾತ್ರ ಕಟ್ಟಿಸಿಕೊಂಡು ಬಿಡಲಾಗುತ್ತಿತ್ತು. ಆದರೆ, ಇದೀಗ ಡ್ರಿಂಕ್ & ಡ್ರೈವ್ ತಪಾಸಣೆಯ ವೇಳೆ ಡ್ರೈವಿಂಗ್ ಲೈಸೆನ್ಸ್ ಸಹ ಪರಿಶೀಲನೆ ಮಾಡಲಾಗುತ್ತಿದೆ. ಒಂದೊಮ್ಮೆ ಇದು ಇಲ್ಲದೆ ಇದ್ದರೆ ಎಫ್ಐಆರ್ ದಾಖಲಿಸಿಕೊಂಡು, ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲಾಗುತ್ತದೆ. ಹೀಗಾಗಿ, ವಾಹನ ಸವಾರರು ನಿಯಮ ಉಲ್ಲಂಘನೆ ಮಾಡುವ ಮುಂಚೆ ನೋಡಿಕೊಳ್ಳಿ.
ವಿಶೇಷ ಅಭಿಯಾನ ನಡೆಸಿದ್ದ ಪೊಲೀಸರು: ಬೆಂಗಳೂರಿನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುವವರನ್ನು ಪತ್ತೆ ಮಾಡುವ ಉದ್ದೇಶದಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ವಿಶೇಷ ಅಭಿಯಾನವನ್ನು ನಡೆಸಿದ್ದರು. ಈಚೆಗೆ ನಿರಂತರವಾಗಿ ಈ ಕಾರ್ಯಾಚರಣೆಗಳು ನಡೆದಿದ್ದು, ನಿಯಮ ಉಲ್ಲಂಘನೆ ಮಾಡುವವರ ಮೇಲೆ ದಂಡ ವಿಧಿಸಲಾಗುತ್ತಿದೆ. ಆದರೆ, ಕೆಲವರು ಮದ್ಯ ಸೇವಿಸಿ ಬೇರೆಯವರ ವಾಹನ ಬಳಸುವುದು ಹಾಗೂ ಲೈಸನ್ಸ್ ಇಲ್ಲದೆ ವಾಹನ ಚಲಾಯಿಸುವ ಪ್ರಕರಣಗಳ ಬಗ್ಗೆಯೂ ಅನುಮಾನ ಹಾಗೂ ಕೆಲವು ನಿರ್ದಿಷ್ಟ ಪ್ರಕರಣಗಳಲ್ಲಿ ಇದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೊಸ ಕ್ರಮಗಳನ್ನು ಪೊಲೀಸರು ಅನುಸರಿಸುತ್ತಿದ್ದಾರೆ.