ಬೆಂಗಳೂರು || ಬೆಂಗಳೂರಿನ ಪ್ರಮುಖ ಫ್ಲೈಓವರ್, ರಸ್ತೆಗಳಲ್ಲಿ ವಾಹನ ಸಂಚಾರ ಬಂದ್, ಯಾವಾಗ ?

ಬೆಂಗಳೂರು || ಬೆಂಗಳೂರಿನ ಪ್ರಮುಖ ಫ್ಲೈಓವರ್, ರಸ್ತೆಗಳಲ್ಲಿ ವಾಹನ ಸಂಚಾರ ಬಂದ್, ಯಾವಾಗ ?

ಬೆಂಗಳೂರು: ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನ ವಿವಿಧ ಹಾಗೂ ಪ್ರಮುಖ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯ ವರೆಗೆ ನಗರದ ಪ್ರಮುಖ ಫ್ಲೈಓವರ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಜೋರಾಗಿ ಇರುತ್ತದೆ. ಸಾವಿರಾರು ಜನ ನಗರದ ಪ್ರಮುಖ ಭಾಗಗಳಲ್ಲಿ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರಮುಖ ಮೇಲ್ಸೇತವೆಗಳಲ್ಲಿ ವಾಹನ ಸಂಚಾರಕ್ಕೆ ನಿಷೇಧ ಇರಲಿದೆ. ಎಲ್ಲೆಲ್ಲಿ ವಾಹನ ಸಂಚಾರ ಇರುವುದಿಲ್ಲ ಎನ್ನುವ ಮಾಹಿತಿ ಇಲ್ಲಿದೆ.

ಈ ಸಮಯದಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ಮಾರ್ಗದಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಡ್ರಗ್ಸ್ ಮಾರಾಟದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಕೋಟ್ಯಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಡ್ರಗ್ಸ್ ಕಡಿವಾಣಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಡ್ರಿಂಕ್ ಅಂಡ್ ಡ್ರೈವ್ ಮಾಡುವವರು ಹಾಗೂ ಡ್ರಗ್ಸ್ ತೆಗೆದುಕೊಂಡು ವಾಹನ ಚಲಾಯಿಸುವವರನ್ನು ಪತ್ತೆ ಮಾಡುವ ಉದ್ದೇಶದಿಂದ ಬೆಂಗಳೂರು ಪೊಲೀಸರು ರಾತ್ರಿ ಪೂರ್ತಿ ಗಸ್ತು ತಿರುಗಲಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಭಾರೀ ಭದ್ರತೆಯನ್ನೂ ಕೈಗೊಳ್ಳಲಾಗಿದೆ. ಅಂದಾಜು 10,000 ಸಾವಿರಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಬೆಂಗಳೂರಿನಲ್ಲಿ ಎಲ್ಲೆಲ್ಲಿ ರಾತ್ರಿ ಸಂಚಾರ ಬಂದ್ ? ಬೆಂಗಳೂರಿನ ಹೆಣ್ಣೂರು, ಲಿಂಗರಾಜಪುರ, ಐಟಿಸಿ, ಬಾಣಸವಾಡಿ, ಕಲ್ಪಳ್ಳಿ, ದೊಮ್ಮಲೂರು, ದೇವರಬಿಸನಹಳ್ಳಿ, ಮಹದೇವಪುರ, ದೊಡ್ಡಕ್ಕುಂದಿ, ನಾಗವಾರ, ಮೇಡಹಳ್ಳಿ ಹಾಗೂ ಎ.ಎಂ ರಸ್ತೆ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಆನಂದ್ರಾವ್ ಸರ್ಕಲ್, ಬೆಳ್ಳಂದೂರು, ಬಿಡಿಎ, ಬೆನ್ನಿಗಾನಹಳ್ಳಿ, ಡೈರಿ ಸರ್ಕಲ್, ದೊಮ್ಮಲೂರು, ಹೆಣ್ಣೂರು, ಕಲ್ಯಾಣ ನಗರ, ಕಂಠೀರವ ಸ್ಟೋಡಿಯೋ, ಶಿವನಗರ, ಟಿನ್ ಫ್ಯಾಕ್ಟರಿ, ರಾಜಾಜಿನಗರ ಹಾಗೂ ತುಮಕೂರು ರಸ್ತೆ ಮಾರ್ಗಗಳಲ್ಲೂ ವಾಹನ ಸಂಚಾರಕ್ಕೆ ನಿರ್ಬಂಧ ಇರಲಿದೆ.

ಸ್ವಂತ ವಾಹನ ತರಬೇಡಿ: ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಸಾಧ್ಯವಾದಷ್ಟು ಸ್ವಂತ ವಾಹನಗಳನ್ನು ತರಬೇಡಿ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸೆಂಬರ್ 31 ಹಾಗೂ ಜನವರಿ 1ಕ್ಕೆ ಸಹ ವಾಹನಗಳ ಟೋಯಿಂಗ್ ಇರಲಿದೆ. ಟ್ರಾಫಿಕ್ ಪೊಲೀಸರು ಗುರುತಿಸಿರುವ ಸ್ಥಳಗಳನ್ನು ಹೊರತುಪಡಿಸಿ ಇನ್ನುಳಿದ ಸ್ಥಳಗಳಲ್ಲಿ ವಾಹನ ನಿಲ್ಲಿಸಿದರೆ, ವಾಹನಗಳನ್ನು ಟೋಯಿಂಗ್ ಮಾಡಲಾಗುವುದು ಎಂದು ಬೆಂಗಳೂರು ಪೊಲೀಸರು ಎಚ್ಚರಿಸಿದ್ದಾರೆ. ಸಾರ್ವಜನಿಕರು ಸಾಧ್ಯವಾದಷ್ಟು ಸ್ವಂತ ವಾಹನ ತರಬಾರದು. ಸಾರ್ವಜನಿಕ ಸಾರಿಗೆಗಳಾದ ಮೆಟ್ರೋ, ಬಿಎಂಟಿಸಿ, ಆಟೊ ಹಾಗೂ ಕ್ಯಾಬ್ಗಳನ್ನು ಬಳಸಿ ಎಂದು ಬೆಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.

ಮೆಟ್ರೋದಲ್ಲಿ ಕುಡಿದು ಹೋಗುವಂತಿಲ್ಲ: ಇನ್ನು ಮೆಟ್ರೋದಲ್ಲಿ ಕೂಡ ನೀವು ಇಂದು ಕುಡಿದು ಹೋಗುವಂತಿಲ್ಲ. ಮೆಟ್ರೋ ಸಹ ಈ ನಿಟ್ಟಿನಲ್ಲಿ ಬಿಗಿ ಬಂದೋಬಸ್ತ್ ಮಾಡಿಕೊಂಡಿದೆ. ಮೆಟ್ರೋದಲ್ಲಿ ಕುಡಿದು ಬರುವವರನ್ನು ತಡೆಯಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *