ಬೆಂಗಳೂರು || ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಜಯಂತೋತ್ಸವ : ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ

ಬೆಂಗಳೂರು || ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಜಯಂತೋತ್ಸವ : ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ

ಬೆಂಗಳೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಮೋದಿ, ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಶಿವಕುಮಾರ ಸ್ವಾಮೀಜಿಗಳು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದು ಹೇಳಿದ್ದಾರೆ.

ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ನಮನಗಳು. ಕಾರುಣ್ಯ ಮತ್ತು ದಣಿವರಿಯದ ಸೇವೆಯ ದಾರಿದೀಪವೆಂದು ಅವರನ್ನು ಸ್ಮರಿಸಲಾಗುತ್ತದೆ. ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಅವರು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದು ತಿಳಿಸಿದ್ದಾರೆ.

ಶ್ರೀಗಳ 118ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಶಿವಕುಮಾರ ಸ್ವಾಮೀಜಿಗಳ ಜಯಂತಿ ಪ್ರಯುಕ್ತ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಮಂಗಳವಾರ ಬೆಳಗ್ಗೆ ನೆರವೇರಿದ್ದು, ವಿವಿಧ ಮಠಾಧೀಶರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪೋಸ್ಟ್ ಮಾಡಿ,. ಅನ್ನ, ಅಕ್ಷರ, ಆಶ್ರಯದ ಮೂಲಕ ಅಸಂಖ್ಯಾತ ಮನೆಗಳಲ್ಲಿ ಜ್ಞಾನ ದೀವಿಗೆ ಹಚ್ಚಿದ ಶತಮಾನದ ಸಂತರು, ನಮ್ಮೆಲ್ಲರ ಪಾಲಿನ ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ ಜಯಂತಿಯಂದು ಆ ದಿವ್ಯಚೇತನಕ್ಕೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ. ತ್ರಿವಿಧ ದಾಸೋಹಿ, ಕಾಯಕಯೋಗಿ, ʻನಡೆದಾಡುವ ದೇವರುʼ ಎಂದೇ ಆರಾಧಿಪ, ಲಿಂಗೈಕ್ಯ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ 118ನೇ ಜನ್ಮ ಜಯಂತಿಯಂದು ಭಕ್ತಿಪೂರ್ವಕ ನಮನಗಳು. ಬಡತನ, ಹಸಿವು, ಸಾಮಾಜಿಕ ಅಸಮಾನತೆ ನಿವಾರಣೆಗಾಗಿ ಅವರು ಕೈಗೊಂಡ ಕಾರ್ಯಗಳು ನಮಗೆಲ್ಲಾ ಮಾದರಿಯಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *