ಬೆಂಗಳೂರು : ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಬಗ್ಗೆ ಅಪ್ಡೇಟ್ ನೀಡುತ್ತಿದೆ. ಇದೀಗ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ವೊಂದನ್ನು ಮಾಡಿದ್ದಾರೆ. ಕರ್ನಾಟಕ ರಾಜ್ಯದ ಸರ್ಕಾರಿ ನೌಕರರು ಈ ಸಂಬಂಧ ಮನವಿ ಮಾಡಿದ್ದಾರೆ. ಕರ್ನಾಟಕದ ಸರ್ಕಾರಿ ನೌಕರರು ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಏನು, ಮುಂದಿನ ನಡೆಯ ಬಗ್ಗೆ ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

7ನೇ ವೇತನ ಆಯೋಗ ಜಾರಿ ಮಾಡಬೇಕು ಎಂದು ಸರ್ಕಾರಿ ನೌಕರರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಏಳನೇ ವೇತನ ಆಯೋಗ ಜಾರಿಗೆ ಭಾರೀ ದೊಡ್ಡ ಮಟ್ಟದ ಹೋರಾಟಗಳು ನಡೆದಿದ್ದವು. ಸರ್ಕಾರವು ಸಹ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ರೀತಿ ಇರುವಾಗಲೇ ಸರ್ಕಾರಿ ನೌಕರರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘ ಹಾಗೂ ರಾಜ್ಯದ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಪೌರ ನೌಕರರ ಸಂಘದ ಜಂಟಿ ಸಭೆ ನಡೆಸಲಾಗಿದ್ದು. ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘದಿಂದ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. 7ನೇ ವೇತನ ಆಯೋಗ ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿದಂತೆ ನಮಗೂ ಕೊಡಿ ಎಂದು ಮನವಿ ಮಾಡಿರುವುದಾಗಿ ರಾಜ್ಯಾಧ್ಯಕ್ಷ ಎ.ಅಮೃತ್ ರಾಜ್ ಅವರು ಹೇಳಿದ್ದಾರೆ. ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ಅವರು ಮತ್ತು ಪದಾಧಿಕಾರಿಗಳು ಮತ್ತು ಪೌರ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಎ.ಅಮೃತ್ ರಾಜ್ ಅವರು, 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿದಂತೆ, ಮಹಾನಗರ ಪಾಲಿಕೆ ಮತ್ತು ಪುಸಭೆ/ನಗರ ಸಭೆ/ ಪಟ್ಟಣ ಪಂಚಾಯಿತಿ ನೌಕರರಿಗೆ ಯಥಾವತ್ತಾಗಿ ಸರ್ಕಾರದ ಆರ್ಥಿಕ ಇಲಾಕೆಯಿಂದಲೇ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ಪುರಸಭೆ, ನಗರ ಸಭೆ, ಪಟ್ಟಣ ಪಂಚಾಯಿತಿ ನೌಕರರುಗಳಿಗೆ, ಎಸ್.ಎಫ್.ಸಿ ವೇತನ ನಿಧಿಯಲ್ಲಿ ಶೇ 20 ರಿಂದ 15 % ಪ್ರತಿಶತ ಅನುದಾನ ಕಡಿತ ಮಾಡಿ, ವೇತನ ಅನುದಾನ ಬಿಡುಗಡೆ ಮಾಡಿ, ಈ ವ್ಯತ್ಯಾಸದ ಮೊತ್ತವನ್ನು ಸ್ಥಳೀಯ ಸಂಸ್ಥೆಗಳ ನಿಧಿಯಿಂದಲೇ ಬಳಸಿ, ವೇತನ ಪಾವತಿಸುವಂತೆ ಹೊರಡಿಸಿ ನಡವಳಿ ಆದೇಶವನ್ನು ಹಿಂಪಡೆದು, ಸರ್ಕಾರದ ಆರ್ಥಿಕ ಇಲಾಖೆಯಿಂದಲೇ ಸಂರ್ಪೂಣ ವೇತನ ಭರಿಸಬೇಕು ಎಂದು ಆಗ್ರಹಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕರ್ನಾಟಕ ರಾಜ್ಯ ಪುರಸಭೆ, ನಗರ ಸಭೆ, ಪಟ್ಟಣ ಪಂಚಾಯ್ತಿ ಮತ್ತು ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೂ ಜಾರಿ ಮಾಡಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ KGID, GPF ನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳಾದ ಕರ್ನಾಟಕ ರಾಜ್ಯ ಪುರಸಭೆ, ನಗರ ಸಭೆ, ಪಟ್ಟಣ ಪಂಚಾಯ್ತಿ ಮತ್ತು ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೂ ಜಾರಿ ಮಾಡಿ ಎಂದೂ ಒತ್ತಾಯಿಸಲಾಗಿದೆ. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಯನ್ನು ತಿದ್ದುಪಡಿ ಕರಡು ಅಧಿಸೂಚನೆ ಕೂಡಲೇ ಪ್ರಕಟಿಸಲು ಮನವಿ ಮಾಡಲಾಗಿದೆ. ಅಲ್ಲದೇ ಈ ವಿಚಾರವಾಗಿ ಹಂತ ಹಂತವಾಗಿ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. 12-04-2025 ರಿಂದ ಸರ್ಕಾರಿ ಕಚೇರಿಗಳಲ್ಲಿ ಕಪ್ಪು ಪಟ್ಟಿ (ಬಲತೋಳಿಗೆ ) ಧರಿಸಿ ನ್ಯಾಯಯುತ ಬೇಡಿಕೆ ಪಡೆಯಲು ಅನಿವಾರ್ಯ ಕಾರಣಗಳಿಂದ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಸಂಘವು ತಿಳಿಸಿದೆ.
ನಮ್ಮ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಈಗಾಗಲೇ ಸರ್ಕಾರಕ್ಕೆ ನೀಡಿರುವ ಮನವಿ ಪತ್ರವನ್ನು, ರಾಜ್ಯದ ಉಸ್ತುವಾರಿ ಸಚಿವರುಗಳಿಗೆ/ಶಾಸಕರಿಗೆ/ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಸಹ ಮನವಿ ಪತ್ರ ಸಲ್ಲಿಸಲು ತೀರ್ಮಾನಿಸಲಾಯಿತು. ಮುಂದುವರಿದು 26-05-2025 ರಂದು ಸಾಂಧರ್ಬಿಕ ರಜೆ ಹಾಕಿ, ನ್ಯಾಯಯುತ ಬೇಡಿಕೆ ಪಡೆಯುವ ಹಿತದೃಷ್ಠಿಯಿಂದ ಕೆಲಸ ಕಾರ್ಯಗಳನ್ನು ಅನಿರ್ಧಿಷ್ಟಾವಧಿಗೆ ಸ್ಥಗಿತಗೊಳಿಸುವುದಾಗಿಯೂ ಹೇಳಲಾಗಿದೆ. ಮ ನ್ಯಾಯಯುತ ಬೇಡಿಕೆಗಾಗಿ ಅನಿವಾರ್ಯ ಕಾರಣಗಳಿಂದ ಹೋರಾಟವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.