ಬೆಂಗಳೂರು: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಗುರುತಿಸಲಾಗಿದ್ದು. ಕೇಂದ್ರ ಸರ್ಕಾರದ ಹಂತದಲ್ಲಿ ಪರಿಶೀಲನೆ ನಡೆದಿದೆ. ಯಾವುದೇ ಜಾಗ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಂತಿಮವಾದರೂ ಈ ಭಾಗದಲ್ಲಿ ಭೂಮಿಗೆ ಭರ್ಜರಿ ಬೆಲೆಯೊಂದಿಗೆ 5 ಬಂಪರ್ ಲಾಭಗಳು ಸಿಗಲಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಭೂಮಿಗೆ ಈ ಭಾಗಗಳಲ್ಲಿ ಬಂಗಾರದ ಬೆಲೆ ಬಂದಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಈಗ ಗುರುತಿಸಲಾಗಿರುವ ಮೂರು ಜಾಗಗಳಲ್ಲಿ ಎಲ್ಲೇ ನಿರ್ಮಾಣವಾದರೂ 5 ಬಂಪರ್ ಸಿಗಲಿವೆ. ಎರಡನೇ ವಿಮಾನ ನಿಲ್ದಾಣದಿಂದ ಯಾವೆಲ್ಲಾ ಲಾಭವಾಗಲಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕನಕಪುರ ರಸ್ತೆ – ನೆಲಮಂಗಲ ಹಾಗೂ ಕುಣಿಗಲ್ ಭಾಗದಲ್ಲಿ ಗುರುತಿಸಲಾಗಿದೆ. ಆದರೆ, ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ. ಈ ನಡುವೆ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಒತ್ತಾಯವೂ ಜೋರಾಗಿದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಯಾದರೂ ಭೂಮಿಗೆ ಬಂಗಾರದ ಬೆಲೆ ಸೇರಿದಂತೆ 5 ಭರ್ಜರಿ ಲಾಭಗಳು ಆಗಲಿವೆ.
ಭೂಮಿಗೆ ಬಂಗಾರದ ಬೆಲೆ: ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಎಲ್ಲೆ ನಿರ್ಮಾಣವಾದರೂ. ಈ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ಬರಲಿದೆ. ಹೌದು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 4000 ಸಾವಿರದಿಂದ 5000 ಸಾವಿರ ಎಕರೆ ಭೂಮಿಯ ಅವಶ್ಯಕತೆ ಇದೆ. ಅಲ್ಲದೇ ಈ ಭಾಗದಲ್ಲಿ ಎಲ್ಲೆ ವಿಮಾನ ನಿಲ್ದಾಣವಾದರೂ ಭೂಮಿಗೆ ಬಂಗಾರದ ಬೆಲೆ ಬರುವುದರೊಂದಿಗೆ ಈಗಾಗಲೇ ಇರುವ ಆಸ್ತಿಗಳ ಬೆಲೆಯೂ ಹೆಚ್ಚಳವಾಗಲಿದೆ. ಕೈಗಾರಿಕೆ ಅಭಿವೃದ್ಧಿ: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬೆನ್ನಲ್ಲೇ ಈ ಭಾಗದಲ್ಲಿ ಕೈಗಾರಿಕೆಗಳು ಅಭಿವೃದ್ಧಿಯಾಗಲಿವೆ. ವಹಿವಾಟು ಹಾಗೂ ಕಾರ್ಗೋ (ಸರಕು ಸಾಗಾಣಿಕೆ) ಸೇವೆ ಅಭಿವೃದ್ಧಿ ಆಗಲಿದೆ. ಇದರಿಂದ ಈ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ಬೇಡಿಕೆಯೂ ಹೆಚ್ಚಳವಾಗಲಿದೆ.
ಉದ್ಯೋಗ ಸೃಷ್ಟಿ: ಕೈಗಾರಿಕೆಗಳು ಅಭಿವೃದ್ಧಿ ಆಗುವುದರಿಂದ ಸಹಜವಾಗಿಯೇ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಲಿದ್ದು. ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಕೇವಲ ಒಂದು ಭಾಗದಲ್ಲಿ ಮಾತ್ರ ಅಭಿವೃದ್ಧಿಯಾಗದೆ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಭಾಗದ ಜಿಲ್ಲೆಗಳು ಸಹ ಅಭಿವೃದ್ಧಿ ಆಗಲಿದ್ದು. ವಿವಿಧ ಜಿಲ್ಲೆಗಳ ಜನರಿಗೂ ಅನುಕೂಲವಾಗಲಿದೆ.
ಪ್ರವಾಸೋದ್ಯಮ ಅಭಿವೃದ್ಧಿ: ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳವಾಗಲಿದೆ. ಅಲ್ಲದೇ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುವ ಮೂಲಕ ಲಾಭವಾಗಲಿದೆ. ಹೋಟೆಲ್ & ರೆಸ್ಟೋರೆಂಟ್ಗಳಿಗೆ ಲಾಭ: ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣದಿಂದ ಸಹಜವಾಗಿಯೇ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳ ನಿರ್ಮಾಣವಾಗಲಿದ್ದು. ಈ ಉದ್ಯಮಗಳು ಅಭಿವೃದ್ಧಿ ಆಗಲಿವೆ. ಅಲ್ಲದೇ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲು ಬರುವ ಪ್ರಯಾಣಿಕರಿಗೆ ಅನುಕೂಲಕ್ಕೆ ತಕ್ಕಂತೆ ರೆಸ್ಟೋರೆಂಟ್ ಅಭಿವೃದ್ಧಿಯಾಗಿ ಮತ್ತಷ್ಟು ಉದ್ಯೋಗವೂ ಸೃಷ್ಟಿಯಾಗಲಿದೆ.