ಸಂವಿಧಾನ ಪ್ರತಿಯೊಬ್ಬರಿಗೂ ಅರಿವಿಗೆ ಬರಬೇಕು
ಬೆಂಗಳೂರು : ಭಗವದ್ಗೀತೆಯನ್ನು ವಿದ್ಯಾರ್ಥಿಗಳ ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದು, ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಕುರಿತು ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಜೊತೆ ಸೇರ್ಪಡೆಗೊಂಡ ನಂತರ ಕುಮಾರಸ್ವಾಮಿ ಮನು ವಾದಿ ಆಗಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುತ್ತಿದೆ.
ಸಂವಿಧಾನ ಪ್ರತಿಯೊಬ್ಬರಿಗೂ ಅರಿವಿಗೆ ಬರಬೇಕು. ಅದರಲ್ಲಿಯೂ ಮಕ್ಕಳಿಗೆ ತಮ್ಮ ಹಕ್ಕುಗಳೇನು, ಬಾಧ್ಯತೆಗಳೇನು ಎನ್ನುವುದು ಅರ್ಥ ಆಗಬೇಕು. ಇದರಿಂದಲೇ ಮಕ್ಕಳ ಪಠ್ಯದಲ್ಲಿ ಸಂವಿಧಾನದ ಪೀಠಿಕೆಯನ್ನು ಅಳವಡಿಸಿದ್ದೇವೆ ಎನ್ನುವುದರ ಜೊತೆಗೆ ಅಂಬೇಡ್ಕರರ ಸಾಮಾಜಿಕ ನ್ಯಾಯದ ಹೋರಾಟವನ್ನು ಒತ್ತಿ ಹೇಳಿದ್ದಾರೆ.
For More Updates Join our WhatsApp Group :

