ಬಿಕ್ಲು ಶಿವ ಹ*ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ.
ನವದೆಹಲಿ : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಸುಪ್ರೀಂ ಕೋರ್ಟ್ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದರು.
ಏತನ್ಮಧ್ಯೆ, ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
For More Updates Join our WhatsApp Group :




