ಬೀದರ್: ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಬಡ ರೋಗಿಗಳ ಸಂಜೀವಿನಿ ಆಗಬೇಕಿತ್ತು. ಆದರೆ, ಇಲ್ಲಿನ ವ್ಯವಸ್ಥೆಯೇ ರೋಗಪೀಡಿತವಾಗಿದೆ. ಹೊರಗುತ್ತಿಗೆ ನೌಕರರು ಕಳೆದ 4 ತಿಂಗಳಿಂದ ಸಂಬಳ ಇಲ್ಲದೆ ದುಡಿಯುತ್ತಿದ್ದಾರೆ. ದಶಕದಿಂದಲೂ 300ಕ್ಕೂ ಅಧಿಕ ಡಿ ಹಾಗೂ ಸಿ ವೃಂದದ ಮಹಿಳಾ ಹಾಗೂ ಪುರುಷ ನೌಕರರು ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ನೌಕರರಾಗಿದ್ದಾರೆ. ಈಗ ಇವರೆಲ್ಲ ಸಂಬಳ ಕೊಡಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮೊರೆ ಹೋಗಿದ್ದಾರೆ. ವಾರದಲ್ಲಿ ಸಂಬಳವಾಗದಿದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಅಲ್ಲದೇ, ಬ್ರಿಮ್ಸ್ ವ್ಯವಸ್ಥೆಗೆ ಕಾಯಕಲ್ಪ ನೀಡುವ ಬಗ್ಗೆಯೂ ಸಚಿವರು ಭರವಸೆಯ ಮಾತುಗಳನ್ನಾಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರಿಗೆ ಖಂಡ್ರೆ ಪತ್ರ
ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ತೆಲಂಗಾಣ, ಮಹಾರಾಷ್ಟ್ರದಿಂದ್ಲೂ ರೋಗಿಗಳು ಬರುತ್ತಾರೆ. ಆದರೆ, ಅವರಿಗೆಲ್ಲ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಹಣ ಕೊಡದೆ ಸಿಬ್ಬಂದಿ ಏನೂ ಮಾಡುವುದಿಲ್ಲ ಎಂಬ ಆರೋಪ ಇದೆ. ಬಾಣಂತಿಯರು ಬಿಸಿನೀರನ್ನು ಹಣ ಕೊಟ್ಟು ಹೊರಗಿನಿಂದ ತರುವ ಸ್ಥಿತಿಯಿದೆ. ಇದರ ಜತೆಗೆ ಇನ್ನೂ ಹತ್ತಾರು ಸಮಸ್ಯೆಗಳಿವೆ. ಬ್ರಿಮ್ಸ್ ನಿರ್ದೇಶಕ ಶಿವಕುಮಾರ್ ಶಟಕಾರ್ ಸೇರಿ ಹಲವರ ವಿರುದ್ಧ ಸಾಕಷ್ಟು ಆರೋಪಗಳಿವೆ. ಹಾಗಾಗಿ, ಆಸ್ಪತ್ರೆಗೆ ಕಾಯಕಲ್ಪ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್‌ಗೆ ಸಚಿವ ಖಂಡ್ರೆ ಪತ್ರ ಬರೆದಿದ್ದಾರೆ.
For More Updates Join our WhatsApp Group :
