ವಿವಿಧ ಕೇಸ್ ಭೇದಿಸಿ ₹20.38 ಕೋಟಿ ಮಾಲು ವಾರಸುದಾರರಿಗೆ ವಾಪಸ್.
ದಾವಣಗೆರೆ: ಸದ್ಯ ಇಯರ್ ಎಂಡ್ ಮೂಡ್ನಲ್ಲಿರುವ ಜನರು ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ನಾನಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ದಾವಣಗೆರೆ ಪೊಲೀಸರಿಗೆ ಒಂದು ರೀತಿ ಸುವರ್ಣ ಕಾಲವೆಂದರೆ ತಪ್ಪಾಗಲಿಕ್ಕಿಲ್ಲ. ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ನ್ಯಾಮತಿ ಬ್ಯಾಂಕ್ ದರೋಡೆ ಕೇಸ್, ಕ್ಷಣದಲ್ಲಿ ಚಿನ್ನ ಕಣ್ಮರೆ ಮಾಡುವ ಬಾಂಡ್ ಬಾಜಾ ಗ್ಯಾಂಗ್ ಸೇರಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ. ಅಷ್ಟೇ ಅಲ್ಲದೆ 20.38 ಕೋಟಿ ರೂ. ಮೌಲ್ಯದ ಪ್ರಾಪರ್ಟಿ ರಿಟರ್ನ್ಸ್ ಪರೇಡ್ ಮೂಲಕ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.
ಅದು ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ. ಸುಮಾರು 17 ಕೋಟಿ ರೂ. ಮೌಲ್ಯದ ಚಿನ್ನದೋಚಿಕೊಂಡು ಹೋಗಿದ್ದರು. ನ್ಯಾಮತಿ ಪಟ್ಟಣದ ನೆಹರು ರಸ್ತೆಯ ಎಸ್ಬಿಐ ಬ್ಯಾಂಕ್ ಗ್ರಾಹಕರು ಕಣ್ಣೀರು ಹಾಕುವಂತಾಗಿತ್ತು. ಬ್ಯಾಂಕ್ ಪಕ್ಕದಲ್ಲಿ ಬೇಕರಿ ನಡೆಸುತ್ತಿದ್ದ ಅಜಯ್ ಮತ್ತು ವಿಜಯ್ ಎಂಬ ಇಬ್ಬರು ಸಹೋದರು ಚಿನ್ನ ಕದ್ದು ತಮಿಳುನಾಡಿನ ಬಾವಿಯೊಂದರಲ್ಲಿ ಇಟ್ಟಿದ್ದರು. ಅದನ್ನ ಪೊಲೀಸರು ಪತ್ತೆ ಹಚ್ಚಿದ್ದರು.
ಇಂದು ದಾವಣಗೆರೆ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ, ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 20.38 ಕೋಟಿ ರೂ. ಮೌಲ್ಯದ ಪ್ರಾಪರ್ಟಿ ರಿಟರ್ನ್ಸ್ ಪರೇಡ್ ಕಾರ್ಯಕ್ರಮ ನಡೆಯಿತು. ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಭೇದಿಸಿ ಮಾಲೀಕರಿಗೆ ಅವರ ವಸ್ತುಗಳು ಹಸ್ತಾಂತರಿಸಲಾಯಿತು. ಈ ವೇಳೆ ಚಿನ್ನ, ನಗದು, ಬೆಳ್ಳಿ ಕಳೆದುಕೊಂಡಿದ್ದವರ ಮುಖದಲ್ಲಿ ಮಂದಹಾಸ ಮೂಡಿತ್ತು.
For More Updates Join our WhatsApp Group :




