ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಶುರುವಾಗಿದೆ. ಆದರೆ ರೇಷನ್ ಕಾರ್ಡ್ ತಿದ್ದುಪಡಿಗೆ ಜನವರಿ 31 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ಸರ್ಕಾರ ಹಂಚಿಕೊಂಡಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಭಾರೀ ಗೊಂದಲ ಸೃಷ್ಟಿಯಾದ ಮೇಲೆ ಈ ಬಗ್ಗೆ ಸ್ಪಷ್ಟನೆ ನೀಡಲಾಗುತ್ತಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಯಾವಾಗ ಕೊನೆಯ ದಿನಾಂಕ ಹಾಗೂ ರೇಷನ್ ಕಾರ್ಡ್ದಾರರು ತಿದ್ದುಪಡಿಗೆ ಏನು ಮಾಡಬೇಕು ಎನ್ನುವ ಬಗ್ಗೆ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ರೇಷನ್ ಕಾರ್ಡ್ದಾರರಿಗೆ ಇದು ಅತ್ಯಂತ ಮಹತ್ವದ ಸುದ್ದಿಗಯಾಗಿದೆ.
ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ಗಳ ತಿದ್ದುಪಡಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದವು. ಜನವರಿ 31ರ ಒಳಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬೇಕು ಎನ್ನುವ ವಿಷಯ ಚರ್ಚೆಗೆ ಕಾರಣವಾಗಿತ್ತು. ಬೆಂಗಳೂರಿನ ಬೆಂಗಳೂರು ಒನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳುವುದಕ್ಕೆ ಜನ ಕಿ.ಮೀ ಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದು, ಸಾಕಷ್ಟು ಗೊಂದಲ ಸೃಷ್ಟಿ ಮಾಡಿದೆ. ಬೆಂಗಳೂರಿನಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದಕ್ಕೆ ನೂರಾರು ಜನ ನಿಲ್ಲುತ್ತಿದ್ದು, ಟೋಕನ್ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.
ಕಿ.ಮೀ ವರೆಗೆ ಸರತಿ ಸಾಲಿನಲ್ಲಿ ನಿಂತ ಜನ: ಇನ್ನು ರೇಷನ್ ಕಾರ್ಡ್ಗಳ ತಿದ್ದುಪಡಿಗೆ ಜನವರಿ 31ರಂದೇ ಕೊನೆಯ ದಿನ ಎನ್ನುವ ಗೊಂದಲ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜಾಜಿನಗರ ಬೆಂಗಳೂರು ಒನ್ನಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಈಗ ರಾಜಾಜಿನಗರ ಬೆಂಗಳೂರು ಒನ್ ಕೇಂದ್ರದಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ. ಜನರನ್ನು ನಿಯಂತ್ರಿಸುವುದಕ್ಕೆ ಇಲ್ಲಿನ ಸಿಬ್ಬಂದಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ ಜನರನ್ನು ನಿಯಂತ್ರಿಸುವುದಕ್ಕೆ ಟೋಕಲ್ ವ್ಯವಸ್ಥೆ ಮಾಡಲಾಗಿದ್ದು, ಈ ತಿಂಗಳ ಕೊನೆಯ ವರೆಗೆ ಟೋಕನ್ ಕೊಡಲಾಗಿದೆ ಎಂದು ಹೇಳಲಾಗಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ ಯಾವಾಗ ರೇಷನ್ ಕಾರ್ಡ್ ತಿದ್ದುಪಡಿಯ ಕೊನೆಯ ದಿನಾಂಕದ ಬಗ್ಗೆ ಕೊನೆಗೂ ಆಹಾರ ಸರಬರಾಜು ಇಲಾಖೆ ಸ್ಪಷ್ಟನೆ ಕೊಟ್ಟಿದೆ. ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ಪಡಿತರ ಚೀಟಿದಾರರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಅಲ್ಲದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದಕ್ಕೆ ಸರ್ಕಾರದಿಂದ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಮಾಡಿಲ್ಲ. ಹೀಗಾಗಿ ಸಾರ್ಜನಿಕರು ಆತಂಕಕ್ಕೆ ಒಳಗಾಗದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಹೇಳಲಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಯನ್ನು ಎಲ್ಲಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಜನರಿಗೆ ಈ ವಿಷಯವಾಗಿ ಗೊಂದಲ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತವಾದ ಮಾರ್ಗಸೂಚಿಯನ್ನು ಹೊರಡಿಸುವುದಾಗಿಯೂ ಹೇಳಲಾಗಿದೆ.