ಕೊಳಗೇರಿ ಅಭಿವೃದ್ಧಿ ಮಂಡಳಿಯು ಭರ್ಜರಿ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಸರ್ವರಿಗೂ ಸೂರು ಎನ್ನುವ ಯೋಜನೆಯನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದ್ದು. ಇದೀಗ ಈ ಯೋಜನೆಯ ಅಡಿಯಲ್ಲಿ ಇನ್ನಷ್ಟು ಮನೆಗಳನ್ನು ವಿತರಿಸುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. 4೦,೦೦೦ ಮನೆ ಹಂಚಿಕೆಗೆ ಡೇಟ್ ಫಿಕ್ಸ್ ಮಾಡಲಾಗಿದೆ.

ಬೆಲೆ ಏರಿಕೆಯ ನಡುವೆಯೇ ಕರ್ನಾಟಕ ಸರ್ಕಾರವು ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯು ಮನೆ ಕನಸು ಕಾಣುತ್ತಿರುವವರಿಗೆ ಬಿಗ್ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ರಾಜ್ಯದಲ್ಲಿ ಮನೆ ಕಟ್ಟಬೇಕು ಎನ್ನುವ ಆಸೆಯಲ್ಲಿ ಇರುವವರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ.
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42,345ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡುವುದಾಗಿ ಸರ್ಕಾರ ಹೇಳಿದೆ. ಈ ವಿಷಯವನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಖಚಿತಪಡಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ಈ ಸಂಬOಧ ಪೂರ್ವಭಾವಿ ಸಭೆ ನಡೆಸಿದ ನಂತರ ಅವರು ಮಾತನಾಡಿದ್ದಾರೆ. ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ 36,789 ಮನೆಗಳನ್ನು ರಾಜ್ಯ ಸರ್ಕಾರವು ಹಂಚಿಕೆ ಮಾಡಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27ಕ್ಕೆ ಹುಬ್ಬಳ್ಳಿ ಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬರೋಬ್ಬರಿ 42,345 ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನು 2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟವಾಗಿ ಮನೆಗಳು ಅರ್ಧಕ್ಕೆ ನಿಂತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಮೇಲೆ, ಫಲಾನುಭವಿಗಳ ವಂತಿಗೆಯನ್ನು ತಲಾ 4 ಲಕ್ಷ ರೂಪಾಯಿ ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಆಯುಕ್ತ ಅಶೋಕ್, ತಾಂತ್ರಿಕ ಸಲಹೆಗಾರ ಬಾಲರಾಜ್, ಪ್ರಧಾನ ಎಂಜಿನಿಯರ್ ಸುಧೀರ್, ನಿರ್ದೇಶಕ ವೆಂಕಟೇಶ್, ವಿನಯ್ ಕುಮಾರ್ ಹಾಗೂ ರಶೀದ್ ಸೇರಿದಂತೆ ಹಲವರು ಹಾಜರಿದ್ದರು.