ಡಿ.ಕೆ. ಶಿವಕುಮಾರ್ ಡಿನ್ನರ್ ಮೀಟಿಂಗ್ : ರಾಜಕೀಯ ಚರ್ಚೆ ಇಲ್ಲ.
ಬೆಳಗಾವಿ : ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾಜಿ ಸಚಿವ, ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಆಪ್ತರೊಂದಿಗೆ ನಡೆದ ಭೋಜನಕೂಟದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ, ಊಟ ಚೆನ್ನಾಗಿತ್ತು. ಅಲ್ಲಿ ಮಟನ್, ಚಿಕನ್, ಬಿರಿಯಾನಿ ಬಗ್ಗೆ ಮಾತ್ರ ಚರ್ಚೆ ನಡೆಯಿತು ಎಂದಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ನಂಬರ್ ಗೇಮ್ ನಡೆಯುತ್ತಿದೆ ಎಂಬ ಊಹಾಪೋಹ ತಳ್ಳಿಹಾಕಿದ ಅವರು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಲ್ಲದೆ ಯಡಿಯೂರಪ್ಪ ಅವರ ಬದಲಾವಣೆಯನ್ನು ಉದಾಹರಣೆಯಾಗಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಎಂಟು ಬಾರಿ ಶಾಸಕರಾಗಿ, ಹಲವು ಇಲಾಖೆಗಳ ಮಂತ್ರಿಯಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಅವರಿಗೂ ಅವಕಾಶ ಸಿಗಬೇಕು ಎಂದಿದ್ದಾರೆ.
For More Updates Join our WhatsApp Group :




