ಬಿಹಾರ ಸಿಬ್ಬಂದಿ ಆಯ್ಕೆ ಆಯೋಗ (BSSC) ಆಫೀಸ್ ಅಟೆಂಡೆಂಟ್‌ನ 3727 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ. 10ನೇ ತರಗತಿ ಉತ್ತೀರ್ಣರಾದವರು ಈ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಇದು ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಆಸಕ್ತರು ಕೂಡಲೇ BSSC ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್. ಬಿಹಾರ ಸಿಬ್ಬಂದಿ ಆಯ್ಕೆ ಆಯೋಗ (BSSC) ವಿವಿಧ ಇಲಾಖೆಗಳಲ್ಲಿ ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿದೆ . ಇದು ಇನ್ನೂ ಅರ್ಜಿ ಸಲ್ಲಿಸದವರಿಗೆ ಒಂದು ಸುವರ್ಣಾವಕಾಶವನ್ನು ಒದಗಿಸುತ್ತದೆ. ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 16. ಈ ಹಿಂದೆ, ನೋಂದಣಿಗೆ ಕೊನೆಯ ದಿನಾಂಕ ಸೆಪ್ಟೆಂಬರ್ 24 ಆಗಿತ್ತು.
ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 3727 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಿಸುವ ಕುರಿತು ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಸಹ ಹೊರಡಿಸಿದ್ದು, ಅಭ್ಯರ್ಥಿಗಳು ಇದನ್ನು ಪರಿಶೀಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಅರ್ಜಿದಾರರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನುಇಲ್ಲಿ ತಿಳಿದುಕೊಳ್ಳಿ.
10ನೇ ತರಗತಿ ಪಾಸ್ ಆಗಿದ್ರೆ ಸಾಕು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿದಾರರು 18 ರಿಂದ 37 ವರ್ಷ ವಯಸ್ಸಿನವರಾಗಿರಬೇಕು. ಮೀಸಲು ವರ್ಗಗಳ ಅರ್ಜಿದಾರರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಈ ನೇಮಕಾತಿಗೆ ಅರ್ಜಿ ಶುಲ್ಕ 100 ರೂ.
ಅರ್ಜಿ ಸಲ್ಲಿಸುವುದು ಹೇಗೆ?
- BSSCನ ಅಧಿಕೃತ ವೆಬ್‌ಸೈಟ್ bssc.bihar.gov.in ಗೆ ಭೇಟಿ ನೀಡಿ.
- ಈಗ ಆಫೀಸ್ ಅಟೆಂಡೆಂಟ್ 2025 ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
- Apply Now ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಮತ್ತು ನೋಂದಾಯಿಸಿ.
- ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ ಸಲ್ಲಿಸಿ.
ಆಯ್ಕೆ ಹೇಗೆ ಮಾಡಲಾಗುತ್ತದೆ?
ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಆಗಸ್ಟ್ 4 ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 25 ರಂದು ಪ್ರಾರಂಭವಾಯಿತು. ಆಯ್ಕೆಯಾದ ಅಭ್ಯರ್ಥಿಗಳಿಗೆ 18,000 ರಿಂದ 56,900 ರೂ. ರವರೆಗೆ ಮಾಸಿಕ ವೇತನ ದೊರೆಯಲಿದೆ. ಯಶಸ್ವಿಯಾಗಿ ನೋಂದಾಯಿಸಿಕೊಂಡ ಎಲ್ಲಾ ಅರ್ಜಿದಾರರಿಗೆ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಸರಿಯಾದ ಸಮಯದಲ್ಲಿ ನೀಡಲಾಗುತ್ತದೆ. ಪರೀಕ್ಷಾ ವೇಳಾಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.
For More Updates Join our WhatsApp Group :
