ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಎನ್ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ ಕೇವಲ 35 ರಷ್ಟು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅದರಲ್ಲೂ ಕಾಂಗ್ರೆಸ್ ಕೇವಲ 4 ಕ್ಷೆತ್ರಗಳಲ್ಲಷ್ಟೇ ಮುನ್ನಡೆಯಲ್ಲಿದೆ.
ಈ ಬಗ್ಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು,ತಾಂಶಗಳ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ಬಗ್ಗೆ ಪ್ರಸ್ತಾಪಿಸಿದಾಗ, ಬಿಹಾರದಲ್ಲಿ ಮತದಾರರು ತೀರ್ಪನ್ನು ಕೊಟ್ಟಿದ್ದಾರೆ. ಆ ತೀರ್ಪಿಗೆ ನಾನು ತಲೆಬಾಗುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪೇ ಅಂತಿಮ ಎಂದು ಅವರು ಹೇಳಿದ್ದಾರೆ.
For More Updates Join our WhatsApp Group :
