“ಬಿಹಾರ ಚುನಾವಣೆ ನ್ಯಾಯಯುತವಾಗಿರಲಿಲ್ಲ: ಕಾಂಗ್ರೆಸ್ ನಾಯಕರ ತೀವ್ರ ಆಕ್ರೋಶ.

 “ಬಿಹಾರ ಚುನಾವಣೆ ನ್ಯಾಯಯುತವಾಗಿರಲಿಲ್ಲ: ಕಾಂಗ್ರೆಸ್ ನಾಯಕರ ತೀವ್ರ ಆಕ್ರೋಶ.

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ 202 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್-ಆರ್​ಜೆಡಿ ಮೈತ್ರಿಕೂಟ ಮಹಾಘಟಬಂಧನ್ 35 ಸ್ಥಾನಗಳನ್ನು ಪಡೆದಿದೆ. ಈ ತೀರ್ಪಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಪಕ್ಷದ ಮುಜುಗರದ ಸೋಲಿನ ನಂತರ ಮೊದಲ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಹಾರ ವಿಧಾನಸಭಾ ಚುನಾವಣೆ ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ. ಸಂವಿಧಾನದ ರಕ್ಷಣೆಗಾಗಿ ನಾವು ದೊಡ್ಡ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

“ಮಹಾಘಟಬಂಧನ್‌ನಲ್ಲಿ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬಿಹಾರದಲ್ಲಿ ಈ ಫಲಿತಾಂಶ ನಿಜಕ್ಕೂ ಆಶ್ಚರ್ಯಕರವಾಗಿದೆ. ಆರಂಭದಿಂದಲೂ ನ್ಯಾಯಯುತವಲ್ಲದ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?:

ಬಿಹಾರದಲ್ಲಿ ಜನರ ನಿರ್ಧಾರವನ್ನು ಪಕ್ಷ ಗೌರವಿಸುತ್ತದೆಯಾದರೂ, ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವಲ್ಲಿ ತೊಡಗಿರುವ ಶಕ್ತಿಗಳ ವಿರುದ್ಧ ತಮ್ಮ ಪಕ್ಷವು ಹೋರಾಟವನ್ನು ಮುಂದುವರಿಸುತ್ತದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ನ ನ್ಯೂನತೆಗಳ ಕುರಿತು ಬಿಹಾರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. “ನಾನು ಕಾಂಗ್ರೆಸ್‌ನಲ್ಲಿಲ್ಲ. ನನಗೆ ಮಾತನಾಡಲು ಯಾವುದೇ ಹಕ್ಕಿಲ್ಲ. ಆದರೆ ಟಿಕೆಟ್ ವಿತರಣೆಯ ನಂತರ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿ ನಡೆಸಿ, ಅಂತಹವರು ತಪ್ಪು ಕಾರಣಗಳಿಗಾಗಿ ಟಿಕೆಟ್‌ಗಳನ್ನು ವಿತರಿಸಿದ್ದಾರೆ. ಹಣಕಾಸಿನ ಅಕ್ರಮಗಳು ಮತ್ತು ಇತರ ಸಮಸ್ಯೆಗಳು ಉಂಟಾಗಿವೆ. ಆ ಆರೋಪಗಳು ನಿಜವಾಗಿದ್ದರೆ ಮತ್ತು ಇತರ ಕಾರಣಗಳಿಗಾಗಿ ಟಿಕೆಟ್‌ಗಳನ್ನು ನೀಡಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು.” ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *