ಅಪಘಾತವೋ? ಆತ್ಮಹತ್ಯೆಯೋ? – ಪ್ರೇಮ ವಿಚಾರಕ್ಕೆ ಸಂಶಯ.
ವಿಜಯಪುರ: ಸಾರಿಗೆ ಬಸ್, ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಹೊತ್ತಿಕೊಂಡ ಬೆಂಕಿಯಲ್ಲಿ ಬೈಕ್ ಸವಾರ ಸಜೀವ ದಹನವಾಗಿರುವ ಘಟನೆ ವಿಜಯಪುರಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಟೋಲ್‌ಗೇಟ್ ಬಳಿ ನಡೆದಿದೆ. ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಮೂಲದ ಅಭಿಷೇಕ ನಾಗರಾಳ (25) ಮೃತ ಯುವಕನಾಗಿದ್ದು, ಬಸ್ನ ಚಾಲಕ ಮತ್ತು ನಿರ್ವಾಹಕ ಸೇರಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ನಿಂದ ಕೆಳಗೆ ಇಳಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಆದರೆ ಬಸ್ ಕೂಡ ಬೆಂಕಿಗೆ ಆಹುತಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಆತ್ಮಹತ್ಯೆ ಶಂಕೆ
ಇನ್ನು ಮೇಲ್ನೋಟಕ್ಕೆ ಇದೊಂದು ಅಪಘಾತ ಎಂಬಂತೆ ಕಂಡುಬಂದರೂ ಪ್ರೀತಿ ವಿಚಾರಕ್ಕೆ ಅಭಿಷೇಕ್ ಈ ರೀತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜನಾ ಎಂಬ ಯುವತಿಯನ್ನು ನನ್ನಿಂದ ದೂರ ಮಾಡಿದ್ದಾರೆ. ಹಾಗಾಗಿ ನಾನು ಬದುಕಲ್ಲ ಎಂದು ವಿಡಿಯೋ ಮಾಡಿ ಅದನ್ನು ಆತ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದ. ಹೀಗಾಗಿ ಬೇಕಂತಲೇ ಬಸ್ಗೆ ಬೈಕ್ ಡಿಕ್ಕಿ ಹೊಡೆದಿರುವ ಅನುಮಾನ ಬಂದಿದೆ. ಸಂಜನಾಳನ್ನು ನನ್ನಿಂದ ದೂರು ಮಾಡಿದವರೇ ನನ್ನ ಸಾವಿಗೆ ಕಾರಣ. ವೀರೇಶ್ ನಂದೂರ್, ಚೈತ್ರಾ ನಂದೂರ್, ಸಂಬಂಧಿ ನವೀನ್‌ಕುಮಾರ್ ಪಾಟೀಲ್ ಅವರೇ ಆಕೆಯನ್ನು ತನ್ನಿಂದ ದೂರ ಮಾಡಿದ್ದು. ಹೀಗಾಗಿ ಮಧ್ಯಾಹ್ನದ ಹೊತ್ತಿಗೆ ಸಾಯುತ್ತೇನೆ ಎಂದು ಅಭಿಷೇಕ್ ವಿಡಿಯೋ ಪೋಸ್ಟ್ ಮಾಡಿದ್ದ. ಹೀಗಾಗಿ ಎಲ್ಲ ಆಯಾಮಗಳಲ್ಲಿಯೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಇದು ನಿಜಕ್ಕೂ ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂಬುದು ಆ ಬಳಿಕವೇ ಗೊತ್ತಾಗಬೇಕಿದೆ.
For More Updates Join our WhatsApp Group :




