ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬದಂದು, ಸೆಪ್ಟೆಂಬರ್ 17 ರಂದು “ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ”ಕ್ಕೆ ಚಾಲನೆ ನೀಡಲು ಸಿದ್ಧರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್ ಪೇಜ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಅಭಿಯಾನದ ಮುಖ್ಯ ಉದ್ದೇಶ ದೇಶದಾದ್ಯಂತ ಮಹಿಳೆಯರು ಹಾಗೂ ಮಕ್ಕಳಿಗೆ ಆರೋಗ್ಯ ಸೇವೆಗಳನ್ನು ಬಲಪಡಿಸುವುದು, ಗುಣಮಟ್ಟದ ಆರೈಕೆ ಒದಗಿಸುವುದು ಮತ್ತು ಆರೋಗ್ಯ ಜಾಗೃತಿಯನ್ನು ಹೆಚ್ಚಿಸುವುದಾಗಿದೆ ಎಂದು ನಡ್ಡಾ ತಿಳಿಸಿದ್ದಾರೆ.
ಕಾರ್ಯಕ್ರಮದ ಭಾಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ದೇಶಾದ್ಯಂತ 75,000 ಆರೋಗ್ಯ ಶಿಬಿರಗಳು ಆಯುಷ್ಮಾನ್ ಆರೋಗ್ಯ ಮಂದಿರಗಳು, ಸಮುದಾಯ ಆರೋಗ್ಯ ಕೇಂದ್ರಗಳು (CHCs) ಹಾಗೂ ಇತರ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿವೆ. ಈ ಶಿಬಿರಗಳು ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ಅಗತ್ಯಗಳಿಗೆ ವಿಶೇಷ ಒತ್ತು ನೀಡಲಿವೆ.
ಇದೇ ವೇಳೆ, ಬಿಜೆಪಿ “ಸೇವಾ ಪಖ್ವಾಡ”ವನ್ನು ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಆಚರಿಸಲು ನಿರ್ಧರಿಸಿದ್ದು, ರಾಷ್ಟ್ರವ್ಯಾಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಅದರ ಜೊತೆಗೆ, ಪೌಷ್ಟಿಕಾಂಶ, ಆರೋಗ್ಯ ಜಾಗೃತಿ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸುವ ಉದ್ದೇಶದಿಂದ ದೇಶದಾದ್ಯಂತ ಅಂಗನವಾಡಿಗಳಲ್ಲಿ ಪೋಷಣ್ ಮಾಸ ಆಚರಿಸಲಾಗುವುದು. ಈ ಕ್ರಮಗಳು ಸ್ವಸ್ಥ ಕುಟುಂಬಗಳು ಮತ್ತು ಸಬಲೀಕರಣಗೊಂಡ ಸಮುದಾಯಗಳ ನಿರ್ಮಾಣಕ್ಕೆ ಸಹಾಯಕವಾಗಲಿವೆ ಎಂದು ಬಿಜೆಪಿ ತಿಳಿಸಿದೆ.
For More Updates Join our WhatsApp Group :