ರೈತರಿಗಾಗಿ ನಾಳೆ 20 ಸಾವಿರ ಜನರ ಪ್ರತಿಭಟನೆ.
ಬೆಳಗಾವಿ : ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಈ ನಿಟ್ಟಿನಲ್ಲಿ ರೈತ ವಿರೋಧಿ ನೀತಿ ಖಂಡಿಸಿ ಸದನದ ಒಳಗೂ ಮತ್ತು ಹೊರಗೂ ತರಾಟೆ ತೆಗೆದುಕೊಳ್ಳಲು ವಿಪಕ್ಷಗಳು ಮುಂದಾಗಿವೆ. ಅದಕ್ಕೂ ಮುನ್ನ ನಾಳೆ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ (BJP) ಸಜ್ಜಾಗಿದೆ. ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಅದಕ್ಕೂ ಮುನ್ನ ಇಂದು ಪ್ರತಿಭಟನಾ ಸ್ಥಳಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ R.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಭೇಟಿ ನೀಡಿ ವೇದಿಕೆ ಹಾಗೂ ಇತರೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ಮಾಡಿದ್ದಾರೆ.
ಪ್ರತಿಭಟನೆ ಬಳಿಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ: ಬಿ.ವೈ.ವಿಜಯೇಂದ್ರ
ಪ್ರತಿಭಟನಾ ಸ್ಥಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಕಬ್ಬು ಬೆಳೆಗಾರರು, ಮೆಕ್ಕೆಜೋಳ, ಭತ್ತ, ತೊಗರಿ ಬೆಳೆಗಾರರಿಗೆ ಅನ್ಯಾಯವಾಗಿದೆ. ಹೀಗಾಗಿ ನಾಳೆ 20 ಸಾವಿರಕ್ಕೂ ಹೆಚ್ಚು ರೈತರನ್ನು ಸೇರಿಸಿ ಪ್ರತಿಭಟನೆ ಮಾಡ್ತೇವೆ. ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.
ಕಣ್ಣಿದ್ದು ಕಾಣದಂತೆ, ಕಿವಿ ಇದ್ದು ಕಿವುಡರಂತೆ ವರ್ತಿಸುತ್ತಿದ್ದಾರೆ. ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಾರೆ. ಸಿಎಂ ಪರಿಹಾರ ಕೊಡುತ್ತಾರಾ ಎಂದು ರೈತರು ಕಾಯುತ್ತಿದ್ದಾರೆ. ಖಜಾನೆಗೆ ಬರುತ್ತಿರುವ ದುಡ್ಡು ಎಲ್ಲಿ ಹೋಗುತ್ತಿದೆ. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ನಾವು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
For More Updates Join our WhatsApp Group :



