ವಿಜಯಪುರ : ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ನಡೆದಿದೆ. ಪುತ್ರ ಸಮರ್ಥ ಗೌಡ ವಿಜಯಪುರದಿಂದ ಬ್ಲ್ಯಾಕ್ ಕಲರ್ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟ್ಟಿದ್ದರು.
ಈ ವೇಳೆ ಟೋಲ್ ಸಿಬ್ಬಂದಿ ಸಂಗಪ್ಪ ಹಣ ಕೇಳಿದ್ದಕ್ಕೆ ವಿಜು ಗೌಡ ಪುತ್ರ ಎಂದಿದ್ದಾರೆ. ಯಾವ ವಿಜುಗೌಡ ಅಂತಾ ಸಂಗಪ್ಪ ಕೇಳಿದ್ದಕ್ಕೆ ಥಳಿಸಿರುವ ಆರೋಪ ಮಾಡಲಾಗಿದೆ. ಸದ್ಯ ಹಲ್ಲೆಗೊಳಗಾದ ಸಂಗಪ್ಪಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಮರ್ಥ ಗೌಡ ವಿರುದ್ಧ ಸಿಬ್ಬಂದಿ ದೂರು ದಾಖಲಿಸಲು ಠಾಣೆಗೆ ತೆರಳಿದ್ದಾರೆ.
For More Updates Join our WhatsApp Group :
