BJP ಶಾಸಕ ಸುರೇಶ್​ ಕುಮಾರ್‌ ಆರೋಗ್ಯದಲ್ಲಿ ಏರುಪೇರು : ICUನಲ್ಲಿ ಚಿಕಿತ್ಸೆ

ಬಿಜೆಪಿ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್

ಬಿಜೆಪಿ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್

ಬೆಂಗಳೂರು: ಮಾಜಿ ಸಚಿವ ಹಾಗೂ ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದಿದ್ದು, ನಗರ ಖಾಸಗಿ ಆಸ್ಪತ್ರೆತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಬುಧವಾರ ತಿಳಿದುಬಂದಿದೆ.

ಕಳೆದ ನಾಲ್ಕು ದಿನಗಳಿಂದ ಸುರೇಶ್ ಕುಮಾ‌ರ್ ಅವರು ಚಿಕೂನ್ ಗುನ್ಯಾ ಮತ್ತು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

ಸುರೇಶ್ ಕುಮಾರ್ ಅವರು, ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ಪಕ್ಷದೊಂದಿಗೆ ಮೈಸೂರು ಪಾದಯಾತ್ರೆ ನಂತರ ಸುರೇಶ್ ತಿರುಪತಿ ಪ್ರವಾಸ ಕೈಗೊಂಡಿದ್ದರು. ಕಳೆದೊಂದು ವಾರದಿಂದ ರೂಪಾಂತರಿ ಚಿಕನ್ ಗುನ್ಯಾ ಎಂದು ಕಾಣಿಸಿಕೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಅಲ್ಲದೆ ಬ್ರೈನ್ ಮತ್ತು ಸ್ಪೈನಲ್ ಕಾರ್ಡ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *