ಬಾಂಬ್ ಬೆದರಿಕೆ ಕರೆ : ಏರ್ ಇಂಡಿಯಾ ವಿಮಾನ ವಾಪಸ್ ದೆಹಲಿಗೆ

ಬಾಂಬ್ ಬೆದರಿಕೆ ಕರೆ : ಏರ್ ಇಂಡಿಯಾ ವಿಮಾನ ವಾಪಸ್ ದೆಹಲಿಗೆ

ನವದೆಹಲಿ: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಮುಂಬೈನಿಂದ ನ್ಯೂಯಾರ್ಕ್ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನವನ್ನು ಸೋಮವಾರ ಬೆಳಗಿನ ಜಾವ ದಿಢೀರನೆ ದೆಹಲಿ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ತಂಗಿದೆ. ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಶಿಷ್ಠಾಚಾರದ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *