ಬಿಹಾರ ವಿಧಾನಸಭೆಗೆ Bomb ಬೆದರಿಕೆ: ಭದ್ರತಾ ಎಚ್ಚರಿಕೆ ಹೆಚ್ಚಳ.!

ಬಿಹಾರ ವಿಧಾನಸಭೆಗೆ Bomb ಬೆದರಿಕೆ: ಭದ್ರತಾ ಎಚ್ಚರಿಕೆ ಹೆಚ್ಚಳ.!

ಇಮೇಲ್ ಮೂಲಕ ಬೆದರಿಕೆ – ಶ್ವಾನ ದಳ, ಬಾಂಬ್ ಸ್ಕ್ವಾಡ್‌ನಿಂದ ತೀವ್ರ ಶೋಧ ಕಾರ್ಯಾಚರಣೆ

ಪಾಟ್ನಾ : ಬಿಹಾರ ವಿಧಾನಸಭೆಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದಷ್ಟೇ ದೆಹಲಿ ವಿಧಾನಸಭೆ ಆವರಣದೊಳಗೆ ಕಾರಿನಲ್ಲಿ ನುಗ್ಗಿದ್ದ ವ್ಯಕ್ತಿಯೊಬ್ಬ ಸ್ಪೀಕರ್ ಕಚೇರಿ ಬಳಿ ಹೂವಿನ ಬೊಕ್ಕೆ ಇಟ್ಟು ಹೋಗಿದ್ದ. ಆತನನ್ನು ಬಂಧಿಸಲಾಗಿತ್ತು. ದೆಹಲಿ ವಿಧಾನಸಭೆಗೂ ಬಾಂಬ್ ಬೆದರಿಕೆ ಬಂದಿತ್ತು. ಅದರ ಬೆನ್ನಲ್ಲೇ ಇದೀಗ ಬಿಹಾರ ವಿಧಾನಸಭೆಗೂ ಬಾಂಬ್ ಬೆದರಿಕೆ ಬಂದಿರುವುದರಿಂದ ಶೋಧ ಕಾರ್ಯಾಚರಣೆ ತೀವ್ರವಾಗಿ ನಡೆದಿದೆ.

“ಬಿಹಾರ ವಿಧಾನಸಭೆ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದಿದೆ ಎಂದು ನಮಗೆ ಮಾಹಿತಿ ಬಂದಿದೆ. ಪೊಲೀಸರು ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಂಬ್ ಮತ್ತು ಶ್ವಾನ ದಳದ ತಂಡಗಳನ್ನು ನಿಯೋಜಿಸಲಾಗಿದ್ದು, ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಮಾರ್ಚ್ 13ರಂದು ಕೂಡ ವಿಧಾನಸಭೆಗೆ ಇದೇ ರೀತಿಯ ಬೆದರಿಕೆ ಬಂದಿತ್ತು. ಆದರೆ ಅದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿತ್ತು. ಗುರುವಾರ ದೆಹಲಿ ವಿಧಾನಸಭೆಗೆ ಕೂಡ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿದ್ದು, ಪ್ರಮುಖ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *