ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ.

ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ.

13 ವರ್ಷದ ಬಾಲಕಿ ಕಳುಹಿಸಿದ ಇಮೇಲ್ ಅಲೆರ್ಟ್ ಮಾಡಿದ ಅಧಿಕಾರಿಗಳು.

ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಬೆಳಗ್ಗೆ ಬಂದಿದ್ದ ಅನಾಮಧೇಯ ಬಾಂಬ್ ಬೆದರಿಕೆ ಇಮೇಲ್ ಜಿಲ್ಲಾಡಳಿತವನ್ನು ಕೆಲಕಾಲ ತಲ್ಲಣಗೊಳಿಸಿತು. ಕೋಲಾರ ಹಾಗೂ ಬೀದರ್ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಒಂದೇ ಸಮಯದಲ್ಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಆಡಳಿತ ಯಂತ್ರ ಫುಲ್ ಅಲರ್ಟ್ ಆಗುವಂತೆ ಮಾಡಿತು. ಬೆಳಿಗ್ಗೆ ಸುಮಾರು 6 ಗಂಟೆಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸುಮಾರು ಮೂರು ಗಂಟೆಗಳ ಬಳಿಕ ಈ ವಿಚಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ತಕ್ಷಣವೇ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಅಗ್ನಿಶಾಮಕ ದಳ ಹಾಗೂ ಹೆಚ್ಚುವರಿ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿ ಶೋಧ ನಡೆಸಿದೆ.

ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ಸಿಬ್ಬಂದಿಯನ್ನು ತುರ್ತಾಗಿ ಹೊರಗೆ ಕಳುಹಿಸಿ, ಇಂಚಿಂಚೂ ಪರಿಶೀಲನೆ ನಡೆಸಲಾಯಿತು. ಕಚೇರಿಯ ವಿವಿಧ ವಿಭಾಗಗಳು, ಕೊಠಡಿಗಳು, ವಿ.ಸಿ ಚೇಂಬರ್ ಸೇರಿದಂತೆ ಸಂಪೂರ್ಣ ಜಿಲ್ಲಾಡಳಿತ ಭವನವನ್ನು ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ತಜ್ಞರು ತಪಾಸಣೆ ನಡೆಸಿದರು. ಈ ವೇಳೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಕೆಲಕಾಲ ಭಯ ಮತ್ತು ಆತಂಕದ ವಾತಾವರಣ ಆವರಿಸಿತ್ತು.

ಅಪಘಾತವಶಾತ್, ಅದೇ ಸಮಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ವಿ.ಸಿ ಚೇಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸುತ್ತಿದ್ದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕೂಡ ಸಭೆಯನ್ನು ಸ್ಥಗಿತಗೊಳಿಸಿ ಅಧಿಕಾರಿಗಳೊಂದಿಗೆ ಹೊರಬಂದು ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಹಕಾರ ನೀಡಿದರು.

ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಪರಿಸ್ಥಿತಿಯ ನಿಗಾ ವಹಿಸಿ, ತಪಾಸಣಾ ಕಾರ್ಯವನ್ನು ಮೇಲ್ವಿಚಾರಣೆ ನಡೆಸಿದರು. ಕೆಲ ಗಂಟೆಗಳ ಪರಿಶೀಲನೆಯ ನಂತರ ಯಾವುದೇ ಬಾಂಬ್ ಅಥವಾ ಸ್ಫೋಟಕ ವಸ್ತು ಪತ್ತೆಯಾಗದೇ ಇದ್ದುದರಿಂದ ಜಿಲ್ಲಾಡಳಿತ ಹಾಗೂ ಸಿಬ್ಬಂದಿ ನಿಟ್ಟುಸಿರು ಬಿಟ್ಟರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *