ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಿಜ್ವಾನ್ ಹರ್ಷದ್ ರವರಿಂದ ಚೆಕ್ ವಿತರಣೆ
ಬೆಂಗಳೂರು: ನಗರದಲ್ಲಿ ನಿನ್ನೆ ಆಲಿಕಲ್ಲು ಸಮೇತ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದ ಪರಿಣಾಮವಾಗಿ ಮೃತಪಟ್ಟ 7 ಜನರ ಕುಟುಂಬದ ವಾರಸುದಾರ ಸದಸ್ಯರಿಗೆ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳ ಸೂಚನೆಯಂತೆ ಇಂದು ನಗರದ ಎಂ.ಜಿ. ರಸ್ತೆಯಲ್ಲಿರುವ ಪಿ.ಯು.ಬಿ. ಕಟ್ಟಡದ 10ನೇ ಮಹಡಿಯಲ್ಲಿರುವ ಕೇಂದ್ರ ನಗರ ಪಾಲಿಕೆ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಶ್ರೀ ರಿಜ್ವಾನ್ ಹರ್ಷದ್ ರವರು 5.00 ಲಕ್ಷಗಳ ಮೊತ್ತದ ಚೆಕ್ ನ್ನು ಮೃತರ ಕುಟುಂಬದವರಿಗೆ ವಿತರಿಸಿದರು.* ಈ ಸಂದರ್ಭದಲ್ಲಿ ಕೇಂದ್ರ ನಗರ ಪಾಲಿಕೆಯ *ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್ ರವರು ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್* ಉಪಸ್ಥಿತರಿದ್ದರು.
ಮೃತರ ಕುಟುಂಬದವರಿಗೆ ಸಾಂತ್ವನ: ಮೃತರ ಕುಟುಂಬದವರಿಗೆ ಮಾನ್ಯ ಶಿವಾಜಿನಗರ ಶಾಸಕರಾದ ಶ್ರೀ ರಿಜ್ವಾನ್ ಹರ್ಷದ್ ರವರು ಹಾಗೂ ಮಾನ್ಯ ಆಯುಕ್ತರಾದ ಹರೀಶ್ ಕುಮಾರ್ ರವರು ಸಾಂತ್ವನ ಹೇಳಿದರು.
For More Updates Join our WhatsApp Group :



