ಬೌರಿಂಗ್ ಆಸ್ಪತ್ರೆ ದುರಂತ: ಇಂಜಿನಿಯರ್-ಗುತ್ತಿಗೆದಾರರ ನಿರ್ಲಕ್ಷ್ಯವೇ ಸಾ*ಗೆ ಕಾರಣ.!

ಬೌರಿಂಗ್ ಆಸ್ಪತ್ರೆ ದುರಂತ: ಇಂಜಿನಿಯರ್-ಗುತ್ತಿಗೆದಾರರ ನಿರ್ಲಕ್ಷ್ಯವೇ ಸಾ*ಗೆ ಕಾರಣ.!

7 ಜೀವ ಬ* ಪಡೆದ ಗೋಡೆ ಕುಸಿತ ಪ್ರಕರಣ: ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಅಂತಿಮ ವರದಿ ಸಲ್ಲಿಕೆ.!

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಆವರಣದ ಗೋಡೆ ಕುಸಿದು ಏಳು ಮಂದಿ ಅಮಾಯಕರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಜಗದೀಶ್ ಅವರು ಸರ್ಕಾರಕ್ಕೆ ಅಂತಿಮ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.ದುರಂತದ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸಿರುವ ಜಿಲ್ಲಾಧಿಕಾರಿಗಳು, ಘಟನೆಗೆ ಕಾರಣವಾದ ಅಂಶಗಳನ್ನು ವರದಿಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ನಿರ್ಲಕ್ಷ್ಯವೇ ಮುಳುವಾಯ್ತು: ಜಿಲ್ಲಾಧಿಕಾರಿಗಳು ಸಲ್ಲಿಸಿರುವ ಈ ವರದಿಯಲ್ಲಿ ಸಾವಿನ ಘಟನೆಗೆ ಮುಖ್ಯವಾಗಿ ಆರೋಗ್ಯ ಇಲಾಖೆಯ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರ ಬೇಜವಾಬ್ದಾರಿಯೇ ನೇರ ಕಾರಣ ಎಂದು ಉಲ್ಲೇಖಿಸಲಾಗಿದೆ. ಗೋಡೆಯ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟದ ಕೊರತೆ ಇರುವುದು ಹಾಗೂ ಮಳೆಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳು ವಿಫಲವಾಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಆಡಳಿತ ಮಂಡಳಿಯ ವೈಫಲ್ಯ: ಕೇವಲ ಇಂಜಿನಿಯರ್‌ಗಳು ಮಾತ್ರವಲ್ಲದೆ, ಆಸ್ಪತ್ರೆಯ ಆಡಳಿತ ಮಂಡಳಿಯೂ ಈ ದುರಂತದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ವರದಿ ಹೇಳಿದೆ. ಹಳೆಯದಾಗಿದ್ದ ಗೋಡೆಯ ಸ್ಥಿತಿಗತಿಯ ಬಗ್ಗೆ ಗಮನಹರಿಸದ ಆಡಳಿತ ಮಂಡಳಿಯ ನಿರ್ಲಕ್ಷ್ಯವೂ ಈ ದುರಂತಕ್ಕೆ ಪೂರಕವಾಗಿ ಕೆಲಸ ಮಾಡಿದೆ ಎಂದು ವರದಿಯಲ್ಲಿ ಗಂಭೀರವಾಗಿ ತರಾಟೆಗೆ ತೆಗೆದುಕೊಳ್ಳಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *