‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ದಿನಾಂಕ ಮುಂದಕ್ಕೆ
ಪವನ್ ಕಲ್ಯಾಣ್ ಅವರು ಈಗ ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಆಂಧ್ರದ ಉಪ ಮುಖ್ಯಮಂತ್ರಿ ಆಗಿರುವ ಅವರು ಇನ್ಮುಂದೆ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುವುದು ಅನುಮಾನ. ಹಾಗಾಗಿ ‘ಉಸ್ತಾದ್ ಭಗತ್ ಸಿಂಗ್’ ಅವರ ಕೊನೇ ಸಿನಿಮಾ ಎಂದು ಪರಿಗಣಿಸಲಾಗುತ್ತಿದೆ. ಆದ್ದರಿಂದ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.
ಹರೀಶ್ ಶಂಕರ್ ಅವರು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶ್ರೀಲೀಲಾ, ರಾಶಿ ಖನ್ನಾ, ಅಶುತೋಶ್ ರಾಣ ಮುಂತಾದವರು ಪವನ್ ಕಲ್ಯಾಣ್ ಜೊತೆ ನಟಿಸಿದ್ದಾರೆ. ಈ ಸಿನಿಮಾವನ್ನು ಮಾರ್ಚ್ 26ರಂದು ಬಿಡುಗಡೆ ಮಾಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಆದರೆ ‘ಟಾಕ್ಸಿಕ್’ ಮುಂದಕ್ಕೆ ಹೋಗುತ್ತಿದ್ದಂತೆಯೇ ಮಾರ್ಚ್ 19ರ ದಿನಾಂಕವನ್ನು ‘ಉಸ್ತಾದ್ ಭಗತ್ ಸಿಂಗ್’ ಚಿತ್ರ ಆಕ್ರಮಿಸಿಕೊಂಡಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಉಸ್ತಾದ್ ಭಗತ್ ಸಿಂಗ್’ ಚಿತ್ರ ಈ ಮೊದಲೇ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾದ ಬಿಡುಗಡೆ ತಡವಾಗಿತ್ತು. ಈಗ ಒಂದು ವಾರ ಮುಂಚಿತವಾಗಿ ಬಿಡುಗಡೆ ಆಗಲಿದೆ ಎಂಬ ಸುದ್ದಿ ತಿಳಿದು ಪವನ್ ಕಲ್ಯಾಣ್ ಅಭಿಮಾನಿಗಳು ಖುಷಿ ಆಗಿದ್ದಾರೆ. ಈ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಬಂಡವಾಳ ಹೂಡಿದೆ.
‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಸೆಲೆಬ್ರೇಷನ್ ಮಾಡಲು ನಮ್ಮ ಉಸ್ತಾದ್ ಒಂದು ವಾರ ಮುಂಚೆಯೇ ಬರುತ್ತಿದ್ದಾರೆ. ಮಾರ್ಚ್ 19ರಂದು ವಿಶ್ವಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲಿದೆ’ ಎಂದು ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಪೋಸ್ಟ್ ಮಾಡಿದೆ.
For More Updates Join our WhatsApp Group :




