3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಪ್ರವಾಸ ಸಮಯ 60 ನಿಮಿಷ ಕಡಿಮೆ.
ಗುವಾಹಟಿ : ಅಸ್ಸಾಂನ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಲಾಗಿರುವ 6 ಪಥಗಳ ಎಕ್ಸ್‌ಟ್ರಾಡೋಸ್ಡ್ ಪ್ರಿಸ್ಟ್ರೆಸ್ಡ್ ಕಾಂಕ್ರೀಟ್ (ಪಿಎಸ್‌ಸಿ) ಸೇತುವೆಯಾದ ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.
ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ ಸೇತುವೆಯು ಈಶಾನ್ಯ ಭಾರತದಲ್ಲಿ ಮೊದಲ ಎಕ್ಸ್‌ಟ್ರಾಡೋಸ್ಡ್ ರಚನೆಯಾಗಿದೆ.
For More Updates Join our WhatsApp Group :




